Shivamogga District Court Recruitment 2021 : 7 ಆದೇಶ ಜಾರಿಕಾರ/ಪ್ರೊಸೆಸ್ ಜಾರಿಕಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಚೇರಿ, ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 7 ಪ್ರೋಸೆಸ್ ಜಾರಿಕಾರ/ಆದೇಶ ಜಾರಿಕಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 23,2021 ರಿಂದ ಡಿಸೆಂಬರ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 7 ಪ್ರೊಸೆಸ್ ಸರ್ವರ್ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿಯ ಪ್ರೋಸೆಸ್ ಜಾರಿಕಾರ/ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವಾಹನ ಚಾಲನೆಯ ಲೈಸನ್ಸ್ ಇರುವವರಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ:

ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿಯ ಪ್ರೋಸೆಸ್ ಜಾರಿಕಾರ/ಆದೇಶ ಜಾರಿಕಾರ ಹುದ್ದೆಗಳಿಗೆ ಡಿಸೆಂಬರ್ 30,202೧ರ ಅನ್ವಯ ಕನಿಷ್ಠ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ್ರವರ್ಗ-2ಎ,2ಬಿ, 3ಎ,3ಬಿಯ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುವುದು.

ವೇತನದ ವಿವರ:

ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿಯ ಪ್ರೋಸೆಸ್ ಜಾರಿಕಾರ/ಆದೇಶ ಜಾರಿಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,950/- ರಿಂದ 37,900/-ರೂ ಮತ್ತು ಇತರೆ ಭತ್ಯೆಗಳನ್ನು ವೇತನವಾಗಿ ನೀಡಲಾಗುವುದು.

ಆಯ್ಕೆ ವಿಧಾನ:

ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿಯ ಪ್ರೋಸೆಸ್ ಜಾರಿಕಾರ/ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕನ್ನಡ ಓದಲು ಮತ್ತು ಬರೆಯಲು ಅಭ್ಯರ್ಥಿ ಹೊಂದಿರುವ ಪ್ರಾವೀಣ್ಯತೆ ಮತ್ತು ಅಭ್ಯರ್ಥಿಯ ಸಾಮಾನ್ಯ ಜ್ಞಾನದ ಬಗ್ಗೆ ಸಂದರ್ಶನ ನಡೆಸಲಾಗುವುದು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 25 ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನವು 10 ಅಂಕಗಳನ್ನೊಳಗೊಂಡಿರುತ್ತದೆ.

ನಿಗದಿತ ಅರ್ಜಿ ಶುಲ್ಕ:

ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿಯ ಪ್ರೋಸೆಸ್ ಜಾರಿಕಾರ/ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 200/-ರೂ ಮತ್ತು ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಅರ್ಜಿ ಶುಲ್ಕ ಪಾವತಿಸಬೇಕಾದ ವಿಧಾನ:

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/shivamogga-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan download ಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ. ಈ ರೀತಿ net banking/credit card/ debit card/challan downloadಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಡಿಸೆಂಬರ್ 31,2021ರೊಳಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಈ ಮೇಲಿನ ವಿಧಾನಗಳನ್ನು ಹೊರತು ಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್, ನಗದು, ಮನಿ ಆರ್ಡರ್ ಇವುಗಳ ರೂಪದಲ್ಲಿ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕವನ್ನು ಪಾವತಿಸದ ಅಭ್ಯರ್ಥಿಗಳ ಅರ್ಜಿಯನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/shivamogga-onlinerecruitment ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 23,2021 ರಿಂದ ಡಿಸೆಂಬರ್ 30,2021ರ ರಾತ್ರಿ 11:59ರೊಳಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಆನ್‌ಲೈನ್ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಗಳು ನೇರವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Shivamogga district court recruitment 2021 notification has been released for 7 process server posts. Interested candidates can apply through online before December 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+