SIDBI Recruitment 2021 : 30 ಡೆವಲಪರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI) ನಲ್ಲಿ 30 ಡೆವಲಪರ್, ಟೆಕ್ನಿಕಲ್ ಲೀಡ್, ಟೆಕ್ನಿಕಲ್ ಆರ್ಕಿಟೆಕ್ಟ್ ಮತ್ತು ಟೆಕ್ನಿಕಲ್ ಪ್ರೊಗ್ರಾಮ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ನವೆಂಬರ್ 21ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಎಸ್‌ಐಡಿಬಿಐ ನಲ್ಲಿ 30 ಹುದ್ದೆಗಳ ನೇಮಕಾತಿ

ಚೆನ್ನೈ, ಮುಂಬೈ, ಲಕ್ನೊ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಲು ಇಚ್ಚಿಸುವ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:

ಭಾರತದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI) ನೇಮಕಾತಿಯ ಡೆವಲಪರ್ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವಿ ಅಥವಾ ಎಂಸಿಎ, ಟೆಕ್ನಿಕಲ್ ಲೀಡ್ ಹುದ್ದೆಗಳಿಗೆ ಪದವಿ, ಟೆಕ್ನಿಕಲ್ ಆರ್ಕಿಟೆಕ್ಟ್ ಮತ್ತು ಟೆಕ್ನಿಕಲ್ ಪ್ರೊಗ್ರಾಮ್ ಮ್ಯಾನೇಜರ್ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವಿ ಅಥವಾ ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಭಾರತದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI) ನೇಮಕಾತಿಯ ಡೆವಲಪರ್, ಟೆಕ್ನಿಕಲ್ ಲೀಡ್, ಟೆಕ್ನಿಕಲ್ ಆರ್ಕಿಟೆಕ್ಟ್ ಮತ್ತು ಟೆಕ್ನಿಕಲ್ ಪ್ರೊಗ್ರಾಮ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಕಿರಿಯ ಡೆವಲಪರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ 8,00,000/- ರಿಂದ 12,00,000/-ರೂ, ಹಿರಿಯ ಡೆವಲಪರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ 14,00,000/- ರಿಂದ 17,00,000/-ರೂ, ಟೆಕ್ನಿಕಲ್ ಲೀಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ 20,00,000/- ರಿಂದ 25,00,000/-ರೂ, ಲೀಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ

27,00,000/- ರಿಂದ 30,00,000/-ರೂ, ಟೆಕ್ನಿಕಲ್ ಆರ್ಕಿಟೆಕ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ

30,00,000/- ರಿಂದ 35,00,000/-ರೂ ಮತ್ತು ಟೆಕ್ನಿಕಲ್ ಪ್ರೊಗ್ರಾಂ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ

35,00,000/- ರಿಂದ 40,00,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಭಾರತದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI) ನೇಮಕಾತಿಯ ಡೆವಲಪರ್, ಟೆಕ್ನಿಕಲ್ ಲೀಡ್, ಟೆಕ್ನಿಕಲ್ ಆರ್ಕಿಟೆಕ್ಟ್ ಮತ್ತು ಟೆಕ್ನಿಕಲ್ ಪ್ರೊಗ್ರಾಮ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಭಾರತದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನೇಮಕಾತಿಯ ಡೆವಲಪರ್, ಟೆಕ್ನಿಕಲ್ ಲೀಡ್, ಟೆಕ್ನಿಕಲ್ ಆರ್ಕಿಟೆಕ್ಟ್ ಮತ್ತು ಟೆಕ್ನಿಕಲ್ ಪ್ರೊಗ್ರಾಮ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://sidbi.in/en ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮತ್ತು ಸ್ಕ್ಯಾನ್ಡ್ ಕಾಪಿಯನ್ನು [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ನವೆಂಬರ್ 21,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Chief General Manager,
Human Resources Vertical (HRV),
Small Industries Development Bank of India,
Swavalamban Bhavan, Plot No. C-11, 'G' Block,
Bandra Kurla Complex, Bandra (East),
Mumbai - 400051

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ : https://sidbi.in/en
ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SIDBI recruitment 2021 notification has been released for 30 developer and various posts. Interested candidates can apply through offline before November 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+