Siddhasiri Souharda Sahakari Limited Recruitment 2021 : 135 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತದಲ್ಲಿ 135 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 11,2021 ಕೊನೆಯ ದಿನವಾಗಿರುತ್ತದೆ. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತದಲ್ಲಿ 135 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಸಿಎ, ಎಂಬಿಎ, ಸ್ನಾತಕೋತ್ತರ ಪದವಿ, ಬಿ.ಕಾಂ, ಎಂ.ಕಾಂ, ಎಂಬಿಎ, ಎಂಸಿಎ, ಬಿ.ಎಸ್ಸಿ, ಬಿಸಿಎ, ಬಿಬಿಎಂ, ಡಿ.ಫಾರ್ಮಾ, ಬಿ.ಫಾರ್ಮಾ, ಎಂಬಿಎ ಮಾರ್ಕೆಟಿಂಗ್, ಎಂ.ಎಸ್ಸಿ ಮತ್ತು 10ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಖಾಲಿ ಹುದ್ದೆಗಳ ವಿವರ :

ಸಿಬ್ಬಂದಿ ತರಬೇತಿ ಅಧಿಕಾರಿ - 2 ಹುದ್ದೆಗಳು
ಆಂತರಿಕ ಲೆಕ್ಕ ಪರಿಶೋಧಕರು - 2 ಹುದ್ದೆಗಳು
ಮಾನವ ಸಂಪನ್ಮೂಲ ಅಧಿಕಾರಿಗಳು - 2 ಹುದ್ದೆಗಳು
ಸಾಲ ಹಾಗೂ ಮುಂಗಡ ವಿಭಾಗ ಮಹಾ ಪ್ರಭಂದಕರು - 2 ಹುದ್ದೆಗಳು
ಮಾರಾಟ ಅಧಿಕಾರಿಗಳು - 5 ಹುದ್ದೆಗಳು
ಹಿರಿಯ ಅಧಿಕಾರಿಗಳು - 30 ಹುದ್ದೆಗಳು
ಕಿರಿಯ ಅಧಿಕಾರಗಳು - 30 ಹುದ್ದೆಗಳು
ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ ವಿತರಕರು - 5 ಹುದ್ದೆಗಳು
ಸಿದ್ಧಸಿರಿ ಕೋಲ್ಡ್ ಸ್ಟೋರೇಜ್ - 5 ಹುದ್ದೆಗಳು,
ಸಿದ್ಧಸಿರಿ ಕೃಷಿ ಸೇವಾ ಕೇಂದ್ರ - 10 ಹುದ್ದೆಗಳು
ಇಲೆಕ್ಟ್ರಿಶಿಯನ್ - 5 ಹುದ್ದೆಗಳು
ವಾಹನ ಚಾಲಕರು - 30 ಹುದ್ದೆಗಳು
ಮತ್ತು ಭದ್ರತಾ ಸಿಬ್ಬಂದಿ - 7 ಹುದ್ದೆಗಳು
ಒಟ್ಟು 135 ಹುದ್ದೆಗಳು

ವಯೋಮಿತಿ:

ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಹುದ್ದೆಗಳಿಗನುಸಾರ ಕನಿಷ್ಟ 19 ರಿಂದ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ ನೇಮಕಾತಿಯ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,000/- ರಿಂದ 25,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಅರ್ಜಿದಾರರು 200/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ. ಇಲೆಕ್ಟ್ರಿಶಿಯನ್, ಡ್ರೈವರ್ಸ್, ಅಟೆಂಡರ್ಸ್ ಮತ್ತು ಗನ್‌ಮ್ಯಾನ್ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 11,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:

ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ,
ವಿಜಯಪುರ ಆಡಳಿತ ಕಛೇರಿ,
ಸಿದ್ದೇಶ್ವರ ದೇವಾಲಯ ಆವರಣ,
ಸಿದ್ದೇಶ್ವರ ಮುಖ್ಯ ರಸ್ತೆ,
ವಿಜಯಪುರ-586101.

ಅಭ್ಯರ್ಥಿಗಳು ನೇಮಕಾತಿ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತದಲ್ಲಿ 135 ಹುದ್ದೆಗಳ ನೇಮಕಾತಿ

More News  

For Quick Alerts
ALLOW NOTIFICATIONS  
For Daily Alerts

English summary
Siddhasiri souharda sahakari limited recruitment 2021 notification has been released for 135 various posts. Interested candidates can apply through offline before November 11.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+