Social Welfare Department 2021 : 5 ವಿಶೇಷ ವಕೀಲ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಲ್ಲಿ 5 ವಿಶೇಷ ವಕೀಲ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ :

ಸಮಾಜ ಕಲ್ಯಾಣ ಇಲಾಖೆ ನೇಮಕಾತಿಯ ವಿಶೇಷ ವಕೀಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಾನೂನು ಪದವೀಧರರಾಗಿರಬೇಕು. ಕಾನೂನು ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ :

ಸಮಾಜ ಕಲ್ಯಾಣ ಇಲಾಖೆ ನೇಮಕಾತಿಯ ವಿಶೇಷ ವಕೀಲ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಟ 40 ವರ್ಷಗಳಿಂದ ಗರಿಷ್ಟ 65 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಹತೆಗಳು :

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಹಿತಾಶಕ್ತಿಯನ್ನು ಕಾಪಾಡುವ ದೃಷ್ಟಿಯಿಂದ ಅರ್ಜಿದಾರರು ಪರಿ‍ಶಿಷ್ಟ ಪಂಗಡ/ಪರಿಶಿಷ್ಟ ಜಾತಿಯವರಾಗಿರಬೇಕು ಮತ್ತು ಕರ್ನಾಟಕ ರಾಜ್ಯದ ಅಭ್ಯರ್ಥಿಯಾಗಿರಬೇಕು. ವಿಶೇಷ ವಕೀಲ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ವಕೀಲರಾಗಿ ಕನಿಷ್ಟ 15 ವರ್ಷಗಳ ಅನುಭವವನ್ನು ಹೊಂದಿರಬೇಕು. ವಕೀಲರಾಗಿ 10 ವರ್ಷಗಳ ಕಾಲ ಮಾನ್ಯ ಉಚ್ಚನ್ಯಾಯಾಲಯದಲ್ಲಿ ಅಭ್ಯಾಸ ಮಾಡುತ್ತಿರುವವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಸಮಾಜ ಕಲ್ಯಾಣ ಇಲಾಖೆ ನೇಮಕಾತಿಯ ವಿಶೇಷ ವಕೀಲ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :

ಸಮಾಜ ಕಲ್ಯಾಣ ಇಲಾಖೆ ನೇಮಕಾತಿಯ ವಿಶೇಷ ವಕೀಲ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ :

ಸಮಾಜ ಕಲ್ಯಾಣ ಇಲಾಖೆ ನೇಮಕಾತಿಯ ವಿಶೇಷ ವಕೀಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಯು ಆನ್‌ಲೈನ್ ನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನಿಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 13,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Special welfare department recruitment 2021 notification has been released for 5 special lawyer posts. Interested candidates can apply through online before October 13.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X