ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕಂಪ್ಯೂಟರ್ ಪ್ರೋಗ್ರಾಮರ್ ಮತ್ತು ಎಸ್ ಡಿ ಸಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಜನವರಿ 10 ರೊಳಗೆ ಅರ್ಜಿಗಳನ್ನು ಸಲ್ಲಿಸತಕ್ಕದ್ದು.

ಹುದ್ದೆಗಳ ವಿವರ
ಕಂಪ್ಯೂಟರ್ ಪ್ರೋಗ್ರಾಮರ್- 02 ಹುದ್ದೆ
ವೇತನ ಶ್ರೇಣಿ: 31320-75905/-
ವಿದ್ಯಾರ್ಹತೆ
ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಖಾಯಂ ತರಗತಿಗೆ ಹಾಜರಾಗಿ ಎಂಸಿಎ ಸ್ನಾತಕೋತ್ತರ ಪದವಿ ಅಥವಾ ಕಂಪ್ಯೂಟರ್ ಶಿಕ್ಷಣದಲ್ಲಿ ಬಿಇ ಪದವಿ ಅಥವಾ ಕಂಪ್ಯೂಟರ್ ಶಿಕ್ಷಣದಲ್ಲಿ ಎಂ.ಎಸ್ಸಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಶೇ,೫೦ ಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿರಬೇಕು.
ದ್ವಿತೀಯ ದರ್ಜೆ ಗುಮಾಸ್ತ (ಎಸ್ ಡಿ ಸಿ)-125 ಹುದ್ದೆಗಳು
ವೇತನ ಶ್ರೇಣಿ:21110-47120/-
ವಿದ್ಯಾರ್ಹತೆ
ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಆರು ತಿಂಗಳ ಅವಧದಿಯ ಕಂಪ್ಯೂಟರ್ ಡಿಪ್ಲೊಮಾ ಅಥವಾ ಕಂಪ್ಯೂಟರ್ ನಲ್ಲಿ 6 ತಿಂಗಳ ಅವಧಿಯ ಯಾವುದೇ ಕೋರ್ಸ್. (ಕಂಪ್ಯೂಟರ್ ಸೈನ್ಸ್ ಪದವಿ ಹೊಂದಿದರವರಿಗೆ ಈ ಷರತ್ತಿನಿಂದ ವಿನಾಯಿತಿ ಇರುವುದು)
ವಯೋಮಿತಿ
ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು,
ಗರಿಷ್ಠ ವಯೋಮಿತಿ
ಸಾಮಾನ್ಯ ವರ್ಗ: 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ: 38 ವರ್ಷ
ಪ.ಜಾ, ಪ.ಪಂ, ಪ್ರ-1 : 40 ವರ್ಷ
ಅರ್ಜಿ ಸಲ್ಲಿಕೆ
ಅಭ್ಯರ್ಥಿಗಳು ಬ್ಯಾಂಕಿನ ವೆಬ್ಸೈಟ್ ನಲ್ಲಿ ಸಿಗುವ ನೇಮಕಾತಿ ಅರ್ಜಿ ಫಾರ್ಮನ್ನು ಆನ್-ಲೈನ್ ಮೂಲಕ ಭರ್ತಿ ಮಾಡಿ ಸಲ್ಲಿಸತಕ್ಕದ್ದು.
ಸಲ್ಲಿಸಿದ ಅರ್ಜಿಯ ಪ್ರಿಂಟ್ ತೆಗೆದು, ಫೋಟೋ ಲಗತ್ತಿಸಿ, ಸಹಿ ಮಾಡಿ ಬ್ಯಾಂಕ್ ಕಚೇರಿ ವಿಳಾಸಕ್ಕೆ ಕಡೆಯ ದಿನಾಂಕಕ್ಕಿಂತ ಮುಂಚಿತವಾಗಿ ಕಳುಹಿಸತಕ್ಕದ್ದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-01-2018
ಅರ್ಜಿ ಶುಲ್ಕ
- ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ ರೂ.500/-
- ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ ರೂ.300/-
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











