South Central Railway Recruitment 2019: 4103 ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ದಕ್ಷಿಣ ಮಧ್ಯ ರೈಲ್ವೆಯಲ್ಲಿ 4103 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 8,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ದಕ್ಷಿಣ ಮಧ್ಯ ರೈಲ್ವೆಯಲ್ಲಿ 4103 ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅಪ್ರೆಂಟಿಸ್
Organisation ದಕ್ಷಿಣ ಮಧ್ಯ ರೈಲ್ವೆ
Educational Qualification 10ನೇ ತರಗತಿ /ತತ್ಸಮಾನ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Application Start Date November 9, 2019
Application End Date December 8, 2019

ವಿದ್ಯಾರ್ಹತೆ:

10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಶೇ.50% ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಬೋರ್ಡ್ ನಿಂದ ಹೊಂದಿರಬೇಕು ಮತ್ತು ಯಾವುದೇ ಟ್ರೇಡ್‌ನಲ್ಲಿ ಐಟಿಐ ಸರ್ಟಿಫಿಕೇಟ್ ಅನ್ನು ಎನ್‌ಸಿವಿಟಿ/ಎಸ್‌ಸಿವಿಟಿ ಇಂದ ಮಾನ್ಯತೆ ಹೊಂದಿರುವ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕದಬಹುದು.

ವಯೋಮಿತಿ:

ಡಿಸೆಂಬರ್ 8,2019ರ ಅನ್ವಯ ಕನಿಷ್ಟ 15 ರಿಂದ ಗರಿಷ್ಟ 24 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ /ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಅಪ್ರೆಂಟಿಸ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ದಕ್ಷಿಣ ಮಧ್ಯ ರೈಲ್ವೆಯ ಅಧಿಕೃತ ವೆಬ್‌ಸೈಟ್‌

https://scr.indianrailways.gov.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 8,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

For Quick Alerts
ALLOW NOTIFICATIONS  
For Daily Alerts

English summary
South Central Railway Recruitment 2019 notification has been released on official website for the recruitment of 4103 apprentice posts. Interested candidates can apply through online before 8th December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X