South Eastern Railway Recruitment 2021 : 1,785 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೌತ್ ಈಸ್ಟರ್ನ್ ರೈಲ್ವೆ (ಆಗ್ನೇಯ ರೈಲ್ವೆ) ಯಲ್ಲಿ 1,785 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸೌತ್ ಈಸ್ಟರ್ನ್ ರೈಲ್ವೆಯಲ್ಲಿ 1,785 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನಿಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 15,2021 ರಿಂದ ಡಿಸೆಂಬರ್ 14,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

South Eastern Railway ನೇಮಕಾತಿ 2021 ವಿದ್ಯಾರ್ಹತೆ :

ಸೌತ್ ಈಸ್ಟರ್ನ್ ರೈಲ್ವೆ (ಆಗ್ನೇಯ ರೈಲ್ವೆ) ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ 10ನೇ ತರಗತಿ/ಮೆಟ್ರಿಕ್ಯುಲೇಶನ್ ಅಥವಾ ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

South Eastern Railway ನೇಮಕಾತಿ 2021 ವಯೋಮಿತಿ :

ಸೌತ್ ಈಸ್ಟರ್ನ್ ರೈಲ್ವೆ (ಆಗ್ನೇಯ ರೈಲ್ವೆ) ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜನವರಿ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿರಬೇಕು. ಪರಿ‍ಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

South Eastern Railway ನೇಮಕಾತಿ 2021 ವೇತನ :

ಸೌತ್ ಈಸ್ಟರ್ನ್ ರೈಲ್ವೆ (ಆಗ್ನೇಯ ರೈಲ್ವೆ) ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

South Eastern Railway ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಸೌತ್ ಈಸ್ಟರ್ನ್ ರೈಲ್ವೆ (ಆಗ್ನೇಯ ರೈಲ್ವೆ) ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

South Eastern Railway ನೇಮಕಾತಿ 2021 ಅರ್ಜಿ ಶುಲ್ಕ :

ಸೌತ್ ಈಸ್ಟರ್ನ್ ರೈಲ್ವೆ (ಆಗ್ನೇಯ ರೈಲ್ವೆ) ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಓದಬಹುದು.

South Eastern Railway ನೇಮಕಾತಿ 2021 ಅರ್ಜಿ ಸಲ್ಲಿಕೆ:

ಸೌತ್ ಈಸ್ಟರ್ನ್ ರೈಲ್ವೆ (ಆಗ್ನೇಯ ರೈಲ್ವೆ) ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ser.indianrailways.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 15,2021 ರಿಂದ ಡಿಸೆಂಬರ್ 14,2021ರ ಸಂಜೆ 5ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
South eastern railway recruitment 2021 notification has been released for 1785 trade apprentice posts. Interested candidates can apply before December 14.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+