ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ 2019: 385 ಪ್ರೊಬೆಷನರಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೌತ್ ಇಂಡಿಯನ್ ಬ್ಯಾಂಕ್ 385 ಪ್ರೊಬೆಷನರಿ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ ಪ್ರೊಬೆಷನರಿ ಕ್ಲರ್ಕ್ ಹುದ್ದೆಗಳಿಗೆ ಇಂದೇ ಅರ್ಜಿ ಹಾಕಿ

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜೂನ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

CRITERIA DETAILS
Name Of The Posts ಪ್ರೊಬೆಷನರಿ ಕ್ಲರ್ಕ್
Organisation ಸೌತ್ ಇಂಡಿಯನ್ ಬ್ಯಾಂಕ್
Educational Qualification 10 ನೇ ತರಗತಿ/ ಎಸ್‌.ಎಸ್‌.ಎಲ್‌.ಸಿ ,12ನೇ ತರಗತಿ,ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 11,765/- ರಿಂದ 31,540/-ರೂ
Application Start Date June 19, 2019
Application End Date June 30, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ 10ನೇ ತರಗತಿ,12ನೇ ತರಗತಿ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,765/- ರಿಂದ 31,540/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 800/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಅಭ್ಯರ್ಥಿಗಳು 150/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಆನ್‌ಲೈನ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.southindianbank.com/ ಗೆ ಹೋಗಿ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ ಮತ್ತು ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
South indian bank recruitment 2019 notification has been released on official website for the recruitment of 385 Probationary Clerk Posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+