ನೈರುತ್ಯ ರೈಲ್ವೆಯಲ್ಲಿ 386 ಹುದ್ದೆಗಳ ನೇಮಕಾತಿ... ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ನೈರುತ್ಯ ರೈಲ್ವೆಯು 386 ಸೀನಿಯರ್ ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ ಮತ್ತು ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ನವೆಂಬರ್ 26,2019ರ ವರೆಗೆ ವಿಸ್ತರಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಈ ಮುಂಚೆ ಅರ್ಜಿಯನ್ನು ನವೆಂಬರ್ 20,2019ರೊಳಗೆ ಆಹ್ವಾನಿಸಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 26,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ನೈರುತ್ಯ ರೈಲ್ವೆಯಲ್ಲಿ ಉದ್ಯೋಗಾವಕಾಶ.. ಆಸಕ್ತರು ನ.26ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಸೀನಿಯರ್ ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ ಮತ್ತು ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್
Organisation ನೈರುತ್ಯ ರೈಲ್ವೆ
Educational Qualification ಪದವಿ ಮತ್ತು 12ನೇ ತರಗತಿ/ದ್ವಿತೀಯ ಪಿಯುಸಿ
Job Location ಭಾರತದೆಲ್ಲೆಡೆ
Salary Scale ನೇಮಕಾತಿ ನಿಯಮಾನುಸಾರ ವೇತನ
Application Start Date October 23, 2019
Application End Date November 26, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ ಮತ್ತು 12ನೇ ತರಗತಿ/ದ್ವಿತೀಯ ಪಿಯುಸಿ ಅನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜನವರಿ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 42 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ,ದಾಖಲೆಗಳ ಪರಿಶೀಲನೆ,ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅಭ್ಯರ್ಥಿಗಳು ನೈರುತ್ಯ ರೈಲ್ವೆಯ ಅಧಿಕೃತ ವೆಬ್‌ಸೈಟ್‌ https://swr.indianrailways.gov.in/ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ನಂತರ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 26,2019ರ ರಾತ್ರಿ 23:45ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
South western railway recruitment 2019 notification has been released on official website for the recruitment of 386 senior commercial cum ticket clerk pots. Interested candidates can apply through online before 26th november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+