ನೈರುತ್ಯ ರೈಲ್ವೆ: 136 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

Posted By:

ನೈರುತ್ಯ ರೈಲ್ವೆಯ ನೇಮಕಾತಿ ಘಟಕವು ಗೂಡ್ಸ್‌ ಗಾರ್ಡ್ಸ್ ಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ.

ಒಟ್ಟು 136 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆನ್‌ಲೈನ್‌ ಎಗ್ಸಾಮ್‌ ಮೂಲಕ ಈ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.

ಹುದ್ದೆಗಳ ವಿವರ

ಖಾಲಿ ಹುದ್ದೆಗಳ ಸಂಖ್ಯೆ : 136

  • ಸಾಮಾನ್ಯ ವರ್ಗದವರಿಗೆ 80
  • ಎಸ್‌ಸಿ ಅಭ್ಯರ್ಥಿಗಳಿಗೆ 32
  • ಎಸ್‌ಟಿ ಅಭ್ಯರ್ಥಿಗಳಿಗೆ 13
  • ಇತರೆ ಹಿಂದುಳಿದ ವರ್ಗದವರಿಗೆ 11
    ನೈರುತ್ಯ ರೈಲ್ವೆ ನೇಮಕಾತಿ

ವಿದ್ಯಾರ್ಹತೆ

ಅಂಗೀಕೃತ ವಿಶ್ವವಿದ್ಯಾಲಯದಿಂದ ಕಲೆ, ವಿಜ್ಞಾನ, ವಾಣಿಜ್ಯ ಸೇರಿದಂತೆ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರುವ ಅಥವಾ ತತ್ಸಮಾನ ಶಿಕ್ಷಣ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಂತಿಮ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ. ಅಂತೆಯೇ ದೂರಶಿಕ್ಷಣದ ಮೂಲಕ ನಿಗದಿತ ವಿದ್ಯಾರ್ಹತೆ ಹೊಂದಿರುವವರೂ ಅರ್ಜಿ ಸಲ್ಲಿಸುವಂತಿಲ್ಲ.

ಭಾರತೀಯ ರೈಲ್ವೆ ಇಲಾಖೆಯಲ್ಲಿ ಶೀಘ್ರದಲ್ಲೇ ಒಂದು ಲಕ್ಷ ಉದ್ಯೋಗ

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 42 ವರ್ಷ. ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಾಗಿದ್ದಲ್ಲಿ ಗರಿಷ್ಠ 45 ವರ್ಷ ಮತ್ತು ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಾಗಿದ್ದಲ್ಲಿ ಗರಿಷ್ಠ 47 ವರ್ಷ ಮೀರಿರಬಾರದು.

ಪರೀಕ್ಷಾ ವಿಧಾನ

ಕಂಪ್ಯೂಟರ್‌ ಆಧರಿತ ಆನ್‌ಲೈನ್‌ ಎಗ್ಸಾಮ್‌ ಮೂಲಕ ಆಯ್ಕೆ ನಡೆಯಲಿದೆ. ಬಹು ಆಯ್ಕೆ ಮಾದರಿಯ 100 ಪ್ರಶ್ನೆಗಳಿಗೆ ಅಭ್ಯರ್ಥಿಗಳು ಉತ್ತರಿಸಬೇಕಾಗುತ್ತದೆ. ಕನ್ನಡ, ಇಂಗ್ಲಿಷ್‌ ಸೇರಿದಂತೆ ವಿವಿಧ ಸ್ಥಳೀಯ ಭಾಷೆಗಳಲ್ಲಿ ಪ್ರಶ್ನೆಪತ್ರಿಕೆಗಳಿರುತ್ತವೆ. ಉತ್ತರಿಸಲು ಒಂದೂವರೆ ಗಂಟೆ ಅವಧಿ ನೀಡಲಾಗುತ್ತದೆ.

ಹುಬ್ಬಳ್ಳಿಯಲ್ಲೇ ಈ ಪರೀಕ್ಷೆ ನಡೆಯಲಿದ್ದು, ಮೊಬೈಲ್‌ ಎಸ್‌ಎಂಎಸ್‌/ಇ-ಮೇಲ್‌ ಮೂಲಕ ಪರೀಕ್ಷಾ ದಿನಾಂಕವನ್ನು ತಿಳಿಸಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದರಲ್ಲಿ ಅರ್ಹತೆ ಗಳಿಸಿದವರನ್ನು ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ನಡೆಸುವ ಮೂಲಕ ನೇಮಕ ಮಾಡಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳು ಹುಬ್ಬಳ್ಳಿ, ಮೈಸೂರು ಮತ್ತು ಬೆಂಗಳೂರು ಡಿವಿಷನ್‌ನಗಳಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಯಾವ ಡಿವಿಷನ್‌ನ ಹುದ್ದೆ ಬೇಕೆಂದು ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನೂ ನೀಡಲಾಗಿರುತ್ತದೆ.

ಮೈಸೂರು ಸೆಸ್ಕಾಂ ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆರ್ಹಾನ

ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್‌ 3, 2017

ಪರೀಕ್ಷಾ ಕೇಂದ್ರ: ಹುಬ್ಬಳ್ಳಿ

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ ವಿಳಾಸ www.rrchubli.in ಗಮನಿಸಿ

English summary
applications are hereby invited ONLINE for filling up of 136 posts of Goods Guard in SOUTH WESTERN RAILWAY RAILWAY RECRUITMENT CELL.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia