ದಕ್ಷಿಣ ರೈಲ್ವೆಯು 3585 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಅಪ್ರೆಂಟಿಸ್ |
| Organisation | ದಕ್ಷಿಣ ರೈಲ್ವೆ |
| Educational Qualification | ಎಸ್‌ಎಸ್‌ಎಲ್‌ಸಿ/ತತ್ಸಮಾನ ವಿದ್ಯಾರ್ಹತೆ, ದ್ವಿತೀಯ ಪಿಯುಸಿ/10+2,ಐಟಿಐ |
| Job Location | ಭಾರತದೆಲ್ಲೆಡೆ |
| Salary Scale | ನೇಮಕಾತಿ ನಿಯಮಾನುಸಾರ ವೇತನ |
| Application Start Date | December 1, 2019 |
| Application End Date | December 31, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಅಪ್ರೆಂಟಿಸ್ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ/ತತ್ಸಮಾನ ವಿದ್ಯಾರ್ಹತೆ, ದ್ವಿತೀಯ ಪಿಯುಸಿ/10+2 ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ಕನಿಷ್ಟ 15 ರಿಂದ ಗರಿಷ್ಟ 22/24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿಯ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನದ ವಿವರ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ದಕ್ಷಿಣ ರೈಲ್ವೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಅಂಗವಿಕಲ ಅಥವಾ ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ದಕ್ಷಿಣ ರೈಲ್ವೆಯ ಅಧಿಕೃತ ವೆಬ್‌ಸೈಟ್ https://sr.indianrailways.gov.in/ ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 31,2019ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











