
ದಕ್ಷಿಣ ರೈಲ್ವೆಯಲ್ಲಿ 191 ಪ್ಯಾರಾಮೆಡಿಕಲ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಜನರಲ್ ನರ್ಸಿಂಗ್, ಬಿ.ಎಸ್ಸಿ, ಪದವಿ, 10+2, ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಏಪ್ರಿಲ್ 1,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,2000/- ರಿಂದ 44,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 30,2021ರೊಳಗೆ ರಿಜಿಸ್ಟ್ರೇಶನ್ ಮಾಡಿಕೊಳ್ಳಬಹುದು.
For Quick Alerts
For Daily Alerts
English summary
Southern railway recruitment 2021 notification has been released for 191 paramedical staff posts.


Click it and Unblock the Notifications











