ಭಾರತೀಯ ಕ್ರೀಡಾ ಪ್ರಾಧಿಕಾರವು (SAI) 220 ಸಹಾಯಕ ತರಬೇತುದಾರರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಭಾರತದೆಲ್ಲೆಡೆ ಎಸ್‌ಎಐ ವಿಭಾಗಗಳಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ದರಿರುವ ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯು ಆಗಸ್ಟ್ 27,2021 ರಿಂದ ಅಕ್ಟೋಬರ್ 10,2021ರ ಸಂಜೆ 5 ಗಂಟೆವರೆಗೆ ನಡೆಯಲಿದೆ.

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ 2021ರ ಹುದ್ದೆಯ ವಿವರಗಳು :
ಕಾಯ್ದಿರಿಸದ - 90 ಹುದ್ದೆಗಳು
ಒಬಿಸಿ - 59 ಹುದ್ದೆಗಳು
ಪರಿಶಿಷ್ಟ ಜಾತಿ - 33 ಹುದ್ದೆಗಳು
ಆರ್ಥಿಕವಾಗಿ ಹಿಂದುಳಿದ - 22 ಹುದ್ದೆಗಳು
ಪರಿಶಿಷ್ಟ ಪಂಗಡ - 16 ಹುದ್ದೆಗಳು
ಒಟ್ಟು - 220 ಹುದ್ದೆಗಳು

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ 2021 ವಿದ್ಯಾರ್ಹತೆ:
ಎಸ್‌ಎಐ ನೇಮಕಾತಿ 2021ರ ಅಸಿಸ್ಟೆಂಟ್ ಕೋಚ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಐ, ಎನ್‌ಎಸ್ ಎನ್‌ಐಎಸ್ ಇಂದ ಅಥವಾ ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ
ತರಬೇತಿಯಲ್ಲಿ ಡಿಪ್ಲೋಮಾ ವಿದ್ಯಾರ್ಹತೆ ಜೊತೆಗೆ ಒಲಿಂಪಿಕ್/ವಿಶ್ವ ಚಾಂಪಿಯನ್‌ಶಿಪ್ ಅಥವಾ ಒಲಿಂಪಿಕ್/ಅಂತಾರಾಷ್ಟ್ರೀಯ ಭಾಗವಹಿಸುವಿಕೆ ಅಥವಾ ದ್ರೋಣಾಚಾರ್ಯ ಪ್ರಶಸ್ತಿ ವಿಜೇತರಾಗಿರಬೇಕು.

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ 2021 ವಯೋಮಿತಿ:
ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿಯ ಸಹಾಯಕ ತರಬೇತುದಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಕ್ಟೋಬರ್ 10, 2021ರ ಅನ್ವಯ ಗರಿಷ್ಟ 40 ವರ್ಷ ವಯೋಮಿತಿಯನ್ನು ಮೀರಿರಬಾರದು.

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ 2021 ವೇತನ ಶ್ರೇಣಿ:
ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿಯ ಸಹಾಯಕ ತರಬೇತುದಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 41,420/- ರಿಂದ 1,12,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ 2021 ಅರ್ಜಿ ಶುಲ್ಕ:
ಎಸ್‌ಎಐ ನೇಮಕಾತಿ 2021 ರ ಸಹಾಯಕ ತರಬೇತುದಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕಕ್ಕೆ ಸಂಬಂಧಿಸಿದ ಮಾಹಿತಿಗಾಗಿ ನೇಮಕಾತಿ ಬಗೆಗಿನ ಅಧಿಕೃತ ಅಧಿಸೂಚನೆಯನ್ನು ಓದಬಹುದು.

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:
ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ 2021ರ ಸಹಾಯಕ ತರಬೇತುದಾರ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆಯಲ್ಲಿ ವಿವರಿಸಿರುವಂತೆ ಆಯ್ಕೆ ಪ್ರಕ್ರಿಯೆಯು ಸಂದರ್ಶನದ ಮೂಲಕ ನಡೆಯಲಿದೆ. ಸಂದರ್ಶನದಲ್ಲಿನಿರ್ಧಿಷ್ಟ ವಿಷಯಗಳಲ್ಲಿ ಮೌಖಿಕ ಪರೀಕ್ಷೆ ನಡೆಸಲಾಗುವುದು.

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ 2021 ಅರ್ಜಿ ಸಲ್ಲಿಕೆ :
ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ 2021ರ ಸಹಾಯಕ ಕೋಚ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.sportsauthorityofindia.nic.in/sai/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 10,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕು ಎಂದು ಅಧಿಕೃತ ಅಧಿಸೂಚನೆ 2021ರಲ್ಲಿ ತಿಳಿಸಲಾಗಿದೆ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.