SAI Recruitment 2021: ನರ್ಸಿಂಗ್ ಅಸಿಸ್ಟೆಂಟ್ ಮತ್ತು ಲ್ಯಾಬ್ ಟೆಕ್ನೀಶಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಕ್ರೀಡಾ ಪ್ರಾಧಿಕಾರ 4 ನರ್ಸಿಂಗ್ ಅಸಿಸ್ಟೆಂಟ್ ಮತ್ತು ಲ್ಯಾಬ್ ಟೆಕ್ನೀಷಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 4,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ನರ್ಸಿಂಗ್ ಅಸಿಸ್ಟೆಂಟ್:
1. ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯ ಮೆಟ್ರಿಕ್ಯುಲೇಶನ್‌/ತತ್ಸಮಾನ ಅರ್ಹತೆ,
2. ಮಾನ್ಯತೆ ಪಡೆದ ಸಂಸ್ಥೆಯಿಂದ ಜನರಲ್ ನರ್ಸಿಂಗ್ ಹಾಗೂ ಪ್ರಸೂತಿಯಲ್ಲಿ ಸರ್ಟಿಫಿಕೇಟ್ ಪಡೆದಿರಬೇಕು ಹಾಗೂ ಪುರುಷ ನರ್ಸ್ ಗಳಿಗೂ ನರ್ಸಿಂಗ್ ನಲ್ಲಿ ಸರಿಸಮನಾದ ಅರ್ಹತೆ ಹೊಂದಿರಬೇಕು.

ಲ್ಯಾಬ್ ಟೆಕ್ನೀಷಿಯನ್:
ಮಾನ್ಯತೆ ಪಡೆದ ಬೋರ್ಡ್ ನಲ್ಲಿ ವಿಜ್ಞಾನ ವಿಷಯದಲ್ಲಿ 12ನೇ ತರಗತಿ ತೇರ್ಗಡೆ ಅಥವಾ ಮಾನ್ಯತೆ ಪಡೆದ ಬೋರ್ಡ್ ನಲ್ಲಿ ಮತ್ತು ಮಾನ್ಯತೆ ಪಡೆದ ಸಂಸ್ಥೆಯ ಡಿಪ್ಲೋಮಾದಲ್ಲಿ ಮೆಡಿಕಲ್ ಲ್ಯಾಬೋರೇಟರಿ ಟೆಕ್ನೀಕ್ ಅರ್ಹತೆ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದ ವಿಜ್ಞಾನ ವಿಷಯದಲ್ಲಿ ಪದವಿ

ವಯೋಮಿತಿ:

ನರ್ಸಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಗರಿಷ್ಟ 40 ವರ್ಷ ಮತ್ತು ಲ್ಯಾಬ್ ಟೆಕ್ನೀಶಿಯನ್ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ನರ್ಸಿಂಗ್ ಅಸಿಸ್ಟೆಂಟ್ ಮತ್ತು ಲ್ಯಾಬ್ ಟೆಕ್ನೀಷಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಮಾರ್ಚ್ 4,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಭಾರತೀಯ ಕ್ರೀಡಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನರ್ಸಿಂಗ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಲ್ಯಾಬ್ ಟೆಕ್ನೀಷಿಯನ್ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
sports authority of india recruitment 2021 notification has been released for 4 nursing assistant and lab technician posts. Interested candidates can apply before March 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X