ಭಾರತದ ಕ್ರೀಡಾ ಪ್ರಾಧಿಕಾರದಲ್ಲಿ 104 ಮಸಾಜ್ ಥೆರಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 15,2022 ರಿಂದ ಆಗಸ್ಟ್ 6,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

Sports Authority Of India ನೇಮಕಾತಿ 2022 ವಿದ್ಯಾರ್ಹತೆ :
ಭಾರತದ ಕ್ರೀಡಾ ಪ್ರಾಧಿಕಾರ ನೇಮಕಾತಿಯ ಮಸಾಜ್ ಥೆರಪಿಸ್ಟ್ ಹುದ್ದೆಗಳಿಗೆ 10ನೇ ತರಗತಿ ಜೊತೆಗೆ ಮಸಾಜ್ ಥೆರಪಿಸ್ಟ್ ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಅನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
Sports Authority Of India ನೇಮಕಾತಿ 2022 ವಯೋಮಿತಿ :
ಭಾರತದ ಕ್ರೀಡಾ ಪ್ರಾಧಿಕಾರ ನೇಮಕಾತಿಯ ಮಸಾಜ್ ಥೆರಪಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಗಸ್ಟ್ 6,2022ರ ಅನ್ವಯ ಗರಿಷ್ಟ 36 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Sports Authority Of India ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಭಾರತದ ಕ್ರೀಡಾ ಪ್ರಾಧಿಕಾರ ನೇಮಕಾತಿಯ ಮಸಾಜ್ ಥೆರಪಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Sports Authority Of India ನೇಮಕಾತಿ 2022 ವೇತನ :
ಭಾರತದ ಕ್ರೀಡಾ ಪ್ರಾಧಿಕಾರ ನೇಮಕಾತಿಯ ಮಸಾಜ್ ಥೆರಪಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
Sports Authority Of India ನೇಮಕಾತಿ 2022 ಅರ್ಜಿ ಶುಲ್ಕ :
ಭಾರತದ ಕ್ರೀಡಾ ಪ್ರಾಧಿಕಾರ ನೇಮಕಾತಿಯ ಮಸಾಜ್ ಥೆರಪಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
Sports Authority Of India ನೇಮಕಾತಿ 2022 ಅರ್ಜಿ ಸಲ್ಲಿಕೆ :
ಭಾರತದ ಕ್ರೀಡಾ ಪ್ರಾಧಿಕಾರ ನೇಮಕಾತಿಯ ಮಸಾಜ್ ಥೆರಪಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://sportsauthorityofindia.nic.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 15 ರಿಂದ ಆಗಸ್ಟ್ 6,2022ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.