ಸಶಸ್ತ್ರ ಸೀಮಾ ಬಲ್ ನೇಮಕಾತಿ 290 ಕಾನ್ಸ್‌ಟೇಬಲ್ (ಜಿಡಿ) ಹುದ್ದೆಗನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಈ ಬಗೆಗೆ ಹೆಚ್ಚು ತಿಳಿಯಲು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಗಧಿತ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಹುದ್ದೆಗಳಿಗೆ ಸಂಬಂಧಿತ ಕಚೇರಿಗಳಿಗೆ ಜೂನ್ 7,2019 ರೊಳಗೆ ಪೋಸ್ಟ್ ಮೂಲಕ ಕಳುಹಿಸಬಹುದು.

| CRITERIA | DETAILS |
| Name Of The Posts | ಕಾನ್ಸ್‌ಟೇಬಲ್ (ಜಿಡಿ) |
| Organisation | ಸಶಸ್ತ್ರ ಸೀಮಾ ಬಲ್ (SSB) |
| Educational Qualification | ಎಸ್‌ಎಸ್‌ಎಲ್‌ಸಿ / ಮೆಟ್ರಿಕ್ / ಅದಕ್ಕೆ ಸಮನಾದ ವಿದ್ಯಾರ್ಹತೆ |
| Job Location | ದೆಹಲಿ, ಭಾರತದೆಲ್ಲೆಡೆ |
| Salary Scale | ಸಂಸ್ಥೆಯ ನಿಯಮಾನುಸಾರ |
| Application Start Date | May 8, 2019 |
| Application End Date | June 7, 2019 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ / ಮೆಟ್ರಿಕ್ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ಬೋರ್ಡ್‌ನಿಂದ ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ, ಪಿಇಟಿ, ಫಿಸಿಕಲ್ ಸ್ಟ್ಯಾಂಡರ್ಡ್ ಟೆಸ್ಟ್ , ಮೆಡಿಕಲ್ ಟೆಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು 25/-ರೂ ಅನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ :
ಈ ಹುದ್ದೆಗಳಿಗೆ ಸೇರ ಬಯವಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://ssb.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ನಂತರನಿಗಧಿತ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಹುದ್ದೆಗಳಿಗೆ ಸಂಬಂಧಿತ ಕಚೇರಿಗಳಿಗೆ ಜೂನ್ 7,2019 ರೊಳಗೆ ಪೋಸ್ಟ್ ಮೂಲಕ ಕಳುಹಿಸಬಹುದು. ಅರ್ಜಿ ಸಲ್ಲಿಸುವ ಬಗೆಗೆ ಹೆಚ್ಚು ತಿಳಿಯಲು ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು.
ಈ ಹುದ್ದೆಗಳ ಬಗೆಗೆ ಮಾಹಿತಿ ತಿಳಿಯಲು ಮತ್ತು ಅರ್ಜಿ ನಮೂನೆ ಪಡೆಯಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











