SSB Recruitment 2020: 1522 ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಶಸ್ತ್ರ ಸೀಮಾ ಬಲ (ಎಸ್ಎಸ್ಬಿ) 1522 ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 20,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ಇತರೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಎಸ್‌ಎಸ್‌ಬಿ ಯಲ್ಲಿ 1,522 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

10ನೇ ತರಗತಿ/ಮೆಟ್ರಿಕ್ಯುಲೇಶನ್ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆ; 10ನೇ ತರಗತಿ/ ಮೆಟ್ರಿಕ್ಯುಲೇಶನ್ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ವಿಜ್ಞಾನ ವಿಷಯದಲ್ಲಿ ಹೊಂದಿರಬೇಕು; ಹುದ್ದೆಗೆ ಸಂಬಂಧ ವಿಷಯದಲ್ಲಿ ಡಿಪ್ಲೋಮಾ/ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ /ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಖಾಲಿ ಹುದ್ದೆಗಳ ವಿವರ:

ಎಸ್‌ಎಸ್‌ಬಿ ಯಲ್ಲಿ 1,522 ಹುದ್ದೆಗಳ ನೇಮಕಾತಿ

ವಯೋಮಿತಿ:

ಎಸ್ಎಸ್ಬಿ ನೇಮಕಾತಿಯ ಕಾನ್ಸ್ ಟೇಬಲ್ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಭಾರತ ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ವೇತನದ ವಿವರ:

ಎಸ್ಎಸ್ಬಿ ನೇಮಕಾತಿಯ ಕಾನ್ಸ್ ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ 69,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಅರ್ಜಿಗಳನ್ನು ಕಿರುಪಟ್ಟಿ ಮಾಡಿ, ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ/ಓಬಿಸಿ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಅಥವಾ ಚಲನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾತಿ/ಪ.ಪಂಗಡ/ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ssb.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾದ ವಿವರಗಳನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 20,2020ರೊಳಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಎಸ್ಎಸ್ಬಿ ನೇಮಕಾತಿಯ ಕಾನ್ಸ್ ಟೇಬಲ್ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
SSB recruitment 2020 notification has been released for 1522 constable posts. Interested candidates can apply through online before December 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X