SSB Recruitment 2020: 1522 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಶಸ್ತ್ರ ಸೀಮಾ ಬಲ 1522 ಕಾನ್ಸ್ಟೇಬಲ್ ಹುದ್ದೆಗಳನ್ನು ಭಾರತದೆಲ್ಲೆಡೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 27,2020ರೊಳಗೆ ಅರ್ಜಿ ಸಲ್ಲಿಸಬಹುದು.

ಎಸ್‌ಎಸ್‌ಬಿ ಯಲ್ಲಿ 1522 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಖಾಲಿ ಹುದ್ದೆಗಳ ವಿವರ:

ಎಸ್‌ಎಸ್‌ಬಿ ಯಲ್ಲಿ 1522 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ

ವಯೋಮಿತಿ:

ಕಾನ್ಸ್ಟೇಬಲ್ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನದ ವಿವರ:

ಕಾನ್ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ 69,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಕಾನ್ಸ್ಟೇಬಲ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾತಿ /ಪ.ಪಂಗಡದ ಅಭ್ಯರ್ಥಿಗಳು ಶುಲ್ಕವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ssb.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 27,2020ರೊಳಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿಯ ಅಧಿಕೃತ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
SSB recruitment 2020 notification has been released for 1522 constable posts. Interested candidates can apply through online before september 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X