ಸಶಸ್ತ್ರ ಬೀಮಾ ಬಲದಲ್ಲಿ 116 ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಆಗಸ್ಟ್ 8ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:
ಪದವಿ, ಡಿಪ್ಲೋಮಾ, ಮೆಟ್ರಿಕ್ಯುಲೇಶನ್, ಬಿ.ಇ, 10+2 ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400/- ರಿಂದ 1,12,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 200/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಮಹಿಳಾ/ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪಿಎಸ್‌ಟಿ, ಪಿಇಟಿ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ssb.nic.in/index.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 8,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.