ಸಶಸ್ತ್ರ ಸೀಮಾ ಬಲದಲ್ಲಿ 13 ಇನ್‌ಸ್ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ನವೆಂಬರ್ 17,2021 ರಿಂದ ಪ್ರಾರಂಭವಾಗಿ ಜನವರಿ 15,2022 ರಂದು ಕೊನೆಗೊಳ್ಳುತ್ತದೆ.

SSB ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :
ಸಶಸ್ತ್ರ ಸೀಮಾ ಬಲ ನೇಮಕಾತಿಯ ಇನ್‌ಸ್ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಟರ್‌ಮೀಡಿಯೇಟ್ (10+2) ; ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆ 2021ರಲ್ಲಿ ಸೂಚಿಸಲಾಗಿದೆ.
SSB ನೇಮಕಾತಿ 2021 ಖಾಲಿ ಹುದ್ದೆಗಳ ವಿವರ:
ಸಬ್ ಇನ್‌ಸ್ಪೆಕ್ಟರ್ - 8 ಹುದ್ದೆಗಳು
ಇನ್‌ಸ್ಪೆಕ್ಟರ್ - 5 ಹುದ್ದೆಗಳು
ಒಟ್ಟು 13 ಹುದ್ದೆಗಳು
SSB ನೇಮಕಾತಿ 2021 ವಯೋಮಿತಿ :
ಸಶಸ್ತ್ರ ಸೀಮಾ ಬಲ ನೇಮಕಾತಿಯ ಇನ್‌ಸ್ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 15,2022ರ ಅನ್ವಯ ಗರಿಷ್ಟ 52 ವರ್ಷ ವಯಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
SSB ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :
ಸಶಸ್ತ್ರ ಸೀಮಾ ಬಲ ನೇಮಕಾತಿಯ ಇನ್‌ಸ್ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಡೆಪ್ಯುಟೇಶನ್/ ಮರು ಉದ್ಯೋಗದ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
SSB ನೇಮಕಾತಿ 2021 ವೇತನ :
ಸಶಸ್ತ್ರ ಸೀಮಾ ಬಲ ನೇಮಕಾತಿಯ ಇನ್‌ಸ್ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
SSB ನೇಮಕಾತಿ 2021 ಅರ್ಜಿ ಶುಲ್ಕ :
ಸಶಸ್ತ್ರ ಸೀಮಾ ಬಲ ನೇಮಕಾತಿಯ ಇನ್‌ಸ್ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆ 2021 ಅನ್ನು ಓದಬಹುದು.
SSB ನೇಮಕಾತಿ 2021 ಅರ್ಜಿ ಸಲ್ಲಿಕೆ :
ಸಶಸ್ತ್ರ ಸೀಮಾ ಬಲ ನೇಮಕಾತಿಯ ಇನ್‌ಸ್ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜನವರಿ 15,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಕಚೇರಿ ವಿಳಾಸ:
"Commandant (Pers-II), Directorate General,
Sashastra Seema Bal,
East Block-V, R.K. Puram, Sector-I.
New Delhi-110066.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.