SSC CGL Exam 2021-2022 : ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಪರೀಕ್ಷೆ 2021ರ ಅಧಿಸೂಚನೆ ಹೊರಡಿಸಿದೆ. ಗ್ರೂಪ್ ಬಿ ಮತ್ತು ಗ್ರೂಪ್ ಸಿಹುದ್ದೆಗಳ ನೇಮಕಾತಿಗಾಗಿ ಈ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 23,2021 ರಿಂದ ಜನವರಿ 23,2022ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಎಸ್‌ಎಸ್‌ಸಿ ಸಿಜಿಎಲ್ ಪರೀಕ್ಷೆಗೆ ಅರ್ಜಿ ಆಹ್ವಾನ

SSC CGL ನೇಮಕಾತಿ 2021 ವಿದ್ಯಾರ್ಹತೆ :

ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

SSC CGL ನೇಮಕಾತಿ 2021 ವಯೋಮಿತಿ :

ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಜನವರಿ 1,2022ರ ಅನ್ವಯ ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಆಭ್ಯರ್ಥಿಗಳು ಅರ್ಜಿ ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

SSC CGL ನೇಮಕಾತಿ 2021 ವೇತನ :

ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 1,51,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

SSC CGL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಟಯರ್ I , ಟಯರ್ II , ಟಯರ್ III ಮತ್ತು ಟಯರ್ IV ಪರೀಕ್ಷೆಗಳ ಮೂಲಕ ಮತ್ತು ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

SSC CGL ನೇಮಕಾತಿ 2021 ಅರ್ಜಿ ಶುಲ್ಕ:

ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಜನವರಿ 23,2022ರ ರಾತ್ರಿ 11:30ರೊಳಗೆ ಮತ್ತು ಆಫ್‌ಲೈನ್ ಮೂಲಕ ಜನವರಿ 25,2022ರೊಳಗೆ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಮಹಿಳಾ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

SSC CGL ನೇಮಕಾತಿ 2021 ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : ಡಿಸೆಂಬರ್ 23,2021
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : ಜನವರಿ 23,2022ರ ರಾತ್ರಿ 11:30
ಆನ್‌ಲೈನ್‌ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 25,2022ರ ರಾತ್ರಿ 11:30
ಆಫ್‌ಲೈನ್ ಚಲನ್ ಜನರೇಟ್ ಆಗಲು ಕೊನೆಯ ದಿನಾಂಕ : ಜನವರಿ 26,2022ರ ರಾತ್ರಿ 11:30
ಅರ್ಜಿ ಶುಲ್ಕ ಚಲನ್ ಮೂಲಕ ಪಾವತಿಸಲು ಕೊನೆಯ ದಿನಾಂಕ : ಜನವರಿ 27,2022
ಅರ್ಜಿಯನ್ನು ವಿತ್‌ಡ್ರಾ ಮಾಡುವ ದಿನಾಂಕ : ಜನವರಿ 28,2022 ರಿಂದ ಫೆಬ್ರವರಿ 1,2022
ಟಯರ್ ಪರೀಕ್ಷೆ ದಿನಾಂಕ : ಏಪ್ರಿಲ್ 2022

SSC CGL ನೇಮಕಾತಿ 2021 ಅರ್ಜಿ ಸಲ್ಲಿಕೆ :

ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ssc.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 23,2022ರ ರಾತ್ರಿ 11:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ತಿದ್ದುಪಡಿಗೆ ಜನವರಿ 28,2022 ರಿಂದ ಫೆಬ್ರವರಿ 1,2022ರ ವರೆಗೆ ಅವಕಾಶ ನೀಡಲಾಗಿರುತ್ತದೆ.

ಅಭ್ಯರ್ಥಿಗಳು ಎಸ್‌ಎಸ್‌ಸಿ ಸಿಜಿಎಲ್ ಪರೀಕ್ಷೆಯ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
SSC combined graduate level examination 2021-2022 notification has been released for recruitment of group b and group c posts. Interested candidates can apply before January 23,2022
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X