SSC CGL Recruitment 2021: 6506 ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಪರೀಕ್ಷೆ 2020ರ ಅಧಿಸೂಚನೆ ಹೊರಡಿಸಿದೆ. 6506 ಗ್ರೂಪ್ ಬಿ ಮತ್ತು ಗ್ರೂಪ್ ಸಿಹುದ್ದೆಗಳ ನೇಮಕಾತಿಗಾಗಿ ಈ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಎಸ್‌ಎಸ್‌ಸಿ ಸಿಜಿಎಲ್ ಪರೀಕ್ಷೆಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಜನವರಿ 1,2021ರ ಅನ್ವಯ ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಆಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 1,51,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಎಸ್‌ಎಸ್‌ಸಿ ಸಿಜಿಎಲ್ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳನ್ನು ಟಯರ್ I , ಟಯರ್ II , ಟಯರ್ III ಮತ್ತು ಟಯರ್ IV ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಫೆಬ್ರವರಿ 2,2021ರ ರಾತ್ರಿ 11:30ರೊಳಗೆ ಮತ್ತು ಆಫ್‌ಲೈನ್ ಮೂಲಕ ಫೆಬ್ರವರಿ 6,2021ರೊಳಗೆ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಮಹಿಳಾ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ssc.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 31,2021ರ ರಾತ್ರಿ 11:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಎಸ್‌ಎಸ್‌ಸಿ ಸಿಜಿಎಲ್ ಪರೀಕ್ಷೆಯ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
SSC combined graduate level examination 2020 notification has been released for recruitment of 6506 group b and group c posts. Interested candidates can apply through online before January 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X