SSC CGL Recruitment 2022: 2000 ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಪರೀಕ್ಷೆ 2022ರ ಅಧಿಸೂಚನೆಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿರುತ್ತದೆ. 2000 ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ಈ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಅರ್ಹ ಅಭ್ಯರ್ಥಿಗಳು ಇಂದು ರಾತ್ರಿ 11 ಗಂಟೆಯೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದು. ಪರೀಕ್ಷೆಗೆ ಅರ್ಜಿ ಸಲ್ಲಿಸುವವರು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಎಸ್‌ಎಸ್‌ಸಿ ಸಿಜಿಎಲ್ ಪರೀಕ್ಷೆ : ಅರ್ಜಿ ಸಲ್ಲಿಕೆಗೆ ಇಂದು ಕೊನೆಯ ಅವಕಾಶ

ವಿದ್ಯಾರ್ಹತೆ :

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಜನವರಿ 1,2022ರ ಅನ್ವಯ ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಆಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,900/- ರಿಂದ 1,42,400/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಟಯರ್ I , ಟಯರ್ II , ಟಯರ್ III ಮತ್ತು ಟಯರ್ IV ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಅಕ್ಟೋಬರ್ 14,2022ರ ರಾತ್ರಿ 11 ಗಂಟೆಯೊಳಗೆ ಮತ್ತು ಆಫ್‌ಲೈನ್ ನಲ್ಲಿ ಚಲನ್ ಮೂಲಕ ಅಕ್ಟೋಬರ್ 15,2022ರೊಳಗೆ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಮಹಿಳಾ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ssc.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಇಂದು ರಾತ್ರಿ 11 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SSC combined graduate level examination 2022 notification has been released and application date ends today for recruitment of 2000 group b and group c posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+