ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (ಸಿಚೆಚ್‌ಎಸ್‌ಎಲ್) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕೆಳ ದರ್ಜೆಯ ಗುಮಾಸ್ತ/ ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಪೋಸ್ಟಲ್ ಅಸಿಸ್ಟೆಂಟ್ ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನವರಿ 10,2020 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ:
ಕೆಳ ದರ್ಜೆಯ ಗುಮಾಸ್ತ/ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್
ವೇತನ ಶ್ರೇಣಿ: ರೂ.19,900/- ರಿಂದ 63,200/-ರೂ
ವಿದ್ಯಾರ್ಹತೆ: ದ್ವಿತೀಯ ಪಿಯುಸಿ
ಪೋಸ್ಟಲ್ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಡಾಟಾ ಎಂಟ್ರಿ ಆಪರೇಟರ್
ವೇತನ ಶ್ರೇಣಿ: ರೂ.25,500/- ರಿಂದ 81,100/-ರೂ
ವಿದ್ಯಾರ್ಹತೆ: ದ್ವಿತೀಯ ಪಿಯುಸಿ
ವಯೋಮಿತಿ:
ನೇಮಕಾತಿ ನಿಯಮಾನುಸಾರ ಜನವರಿ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ,2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ:
ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ಹುದ್ದೆಗೆ ಒಂದೇ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಪರೀಕ್ಷಾ ಶುಲ್ಕ:
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.100/-
ಪ.ಜಾ/ಪ.ಪಂ/ಮಹಿಳೆ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಶುಲ್ಕವನ್ನು ನೆಟ್ ಬ್ಯಾಂಕಿಂಗ್/ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಮೂಲಕ ಪಾವತಿಸಬಹುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 3-12-2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-1-2020ರ ರಾತ್ರಿ 11:59ರೊಳಗೆ
ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಲು ಕೊನೆಯ ದಿನಾಂಕ: 12-1-2020ರ ರಾತ್ರಿ 11:59ರೊಳಗೆ
ಅರ್ಜಿ ಶುಲ್ಕವನ್ನು ಚಲನ್ ಮೂಲಕ ಪಾವತಿಸಲು ಕೊನೆಯ ದಿನಾಂಕ: 14-1-2020
ಕಂಪ್ಯೂಟರ್ ಆಧಾರಿತ ಪರೀಕ್ಷೆಯ (ಟಯರ್-1) ದಿನಾಂಕ: ಮಾರ್ಚ್ 16 ರಿಂದ 27,2020ರ ವರೆಗೆ
ಟಯರ್-2 ಪರೀಕ್ಷೆಯ (ವಿವರಣಾತ್ಮಕ) ದಿನಾಂಕ: ಜೂನ್ 28,2020
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ