ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (ಸಿಚೆಚ್ಎಸ್ಎಲ್) ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. ಎಸ್ಎಸ್ಸಿ ಯು 6,000 ಕೆಳ ದರ್ಜೆಯ ಗುಮಾಸ್ತ/ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಪೋಸ್ಟಲ್ ಅಸಿಸ್ಟೆಂಟ್ ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 15,2020 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ:
ಕೆಳ ದರ್ಜೆಯ ಗುಮಾಸ್ತ/ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್
ಪೋಸ್ಟಲ್ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಡಾಟಾ ಎಂಟ್ರಿ ಆಪರೇಟರ್
ಡಾಟಾ ಎಂಟ್ರಿ ಆಪರೇಟರ್ (ಡಿಇಓ)
ಡಾಟಾ ಎಂಟ್ರಿ ಆಪರೇಟರ್ ಗ್ರೇಡ್-ಎ
ವಿದ್ಯಾರ್ಹತೆ:
ಪಿಯುಸಿ ವಿದ್ಯಾರ್ಹತೆ ಮತ್ತು ಪಿಯುಸಿ ಯಲ್ಲಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:
ನೇಮಕಾತಿ ನಿಯಮಾನುಸಾರ ಜನವರಿ 1,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ, ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷ, ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷಗಳ ವಯೊಮಿತಿ ಸಡಿಲಿಕೆಯನ್ನು
ನೀಡಲಾಗಿರುತ್ತದೆ.

ವೇತನದ ವಿವರ:
ಕೆಳ ದರ್ಜೆಯ ಗುಮಾಸ್ತ/ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/- ರಿಂದ 63,200/-ರೂ, ಪೋಸ್ಟಲ್ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 81,100/-ರೂ ಮತ್ತು ಡಾಟಾ ಎಂಟ್ರಿ ಆಪರೇಟರ್ (ಡಿಇಓ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,200/- ರಿಂದ 92,300/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಟಯರ್-I, ಟಯರ್-II, ಟಯರ್-III (ಕೌಶಲ್ಯ ಪರೀಕ್ಷೆ/ಟೈಪಿಂಗ್ ಪರೀಕ್ಷೆ), ದಾಖಲೆ ಪರಿಶೀಲನೆ ಹಾಗೂ ಸಂದರ್ಶನ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪರೀಕ್ಷಾ ಶುಲ್ಕ:
ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ ರೂ.100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
ಪ.ಜಾ/ಪ.ಪಂ/ಮಹಿಳೆ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಆನ್-ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://ssc.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಒಂದು ಹುದ್ದೆಗೆ ಒಂದೇ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಪ್ರಮುಖ ದಿನಾಂಕಗಳು:
ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-11-2020
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-12-2020ರ ರಾತ್ರಿ 11:30ರೊಳಗೆ
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಲು ಕೊನೆಯ ದಿನಾಂಕ: 17-12-2020ರ ರಾತ್ರಿ 11:30ರೊಳಗೆ
ಅರ್ಜಿ ಶುಲ್ಕವನ್ನು ಚಲನ್ ಮೂಲಕ ಪಾವತಿಸಲು ಕೊನೆಯ ದಿನಾಂಕ: 21-12-2020
ಕಂಪ್ಯೂಟರ್ ಆಧಾರಿತ ಪರೀಕ್ಷೆಯ (ಟಯರ್-1) ದಿನಾಂಕ: ಏಪ್ರಿಲ್ 12-2021 ರಿಂದ ಏಪ್ರಿಲ್ 27,2021ರ ವರೆಗೆ
ಟಯರ್-2 ಪರೀಕ್ಷೆಯ (ವಿವರಣಾತ್ಮಕ) ದಿನಾಂಕ: ಅತೀ ಶೀಘ್ರದಲ್ಲಿ ತಿಳಿಸಲಾಗುವುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ