ಸಿಬ್ಬಂದಿ ನೇಮಕಾತಿ ಆಯೋಗವು 19 ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 30,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:
ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಸಿವಿಲ್, ಮೆಕ್ಯಾನಿಕಲ್ ಮತ್ತು ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿ/ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಜನವರಿ 1,2021ರ ಅನ್ವಯ ಗರಿಷ್ಟ 30 ವರ್ಷ (ಜ್ಯೂನಿಯರ್ ಇಂಜಿನಿಯರ್ ಮೆಕ್ಯಾನಿಕಲ್ ಹುದ್ದೆಗಳಿಗೆ ಗರಿಷ್ಟ 32 ವರ್ಷ) ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನದ ವಿವರ:
ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಎಸ್‌ಎಸ್‌ಸಿ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ನವೆಂಬರ್ 1,2020ರೊಳಗೆ ಪಾವತಿಸಬೇಕಿರುತ್ತದೆ. ಮಹಿಳೆ, ಮಾಜಿ ಸೈನಿಕ, ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಸಿಬ್ಬಂದಿ ನೇಮಕಾತಿ ಆಯೋಗದ ಅಧಿಕೃತ ವೆಬ್‌ಸೈಟ್ https://ssc.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 30,2020ರ ರಾತ್ರಿ 11:30ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅಭ್ಯರ್ಥಿಗಳು ಎಸ್‌ಎಸ್‌ಸಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











