SSC Recruitment 2020: 5846 ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಬ್ಬಂದಿ ನೇಮಕಾತಿ ಆಯೋಗವು 5846 ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 7,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎಸ್‌ಎಸ್‌ಸಿ 5846 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ...ಸೆ.7ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಕಾನ್ಸ್ಟೇಬಲ್ ಹುದ್ದೆಗಳಿಗೆ 12ನೇ ತರಗತಿ/ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜುಲೈ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ. 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಕಾನ್ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ 69,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ಬೆರಳಚ್ಚು ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಸೆಪ್ಟೆಂಬರ್ 9,2020ರೊಳಗೆ ಪಾವತಿಸಬೇಕಿರುತ್ತದೆ. ಮಹಿಳೆ, ಮಾಜಿ ಸೈನಿಕ, ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಸಿಬ್ಬಂದಿ ನೇಮಕಾತಿ ಆಯೋಗದ ಅಧಿಕೃತ ವೆಬ್‌ಸೈಟ್ https://ssc.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 7,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಎಸ್‌ಎಸ್‌ಸಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SSC recruitment 2020 notification has been released on official website for the recruitment of 5846 constable posts. Interested candidates can apply through online before September 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+