SSC Recruitment 2020: 283 ಹಿಂದಿ ಅನುವಾದಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ) 283 ಕಿರಿಯ ಮತ್ತು ಹಿರಿಯ ಹಿಂದಿ ಅನುವಾದಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 25,2020ರ ರಾತ್ರಿ 11:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎಸ್‌ಎಸ್‌ಸಿ 283 ಹುದ್ದೆಗಳ ನೇಮಕಾತಿ..ಜು.25ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಕಿರಿಯ ಮತ್ತು ಹಿರಿಯ ಹಿಂದಿ ಅನುವಾದಕರ ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಕಿರಿಯ ಹಿಂದಿ ಅನುವಾದಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಳಿಗೆ ತಿಂಗಳಿಗೆ 35,400/- ರಿಂದ 1,12,400/-ರೂ ಮತ್ತು ಹಿರಿಯ ಹಿಂದಿ ಅನುವಾದಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,900/-ರಿಂದ 1,42,400/-ರೂ ವೇತನವನ್ನು ನೀಡಲಾಗುವುದು.

ವಯೋಮಿತಿ:

ಹಿಂದಿ ಅನುವಾದಕರ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಎಸ್‌ಎಸ್‌ಸಿ ನೇಮಕಾತಿಯ ಹಿಂದಿ ಅನುವಾದಕರ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ /ಓಬಿಸಿ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ /ಮಾಜಿ ಸೈನಿಕ/ ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಸಿಬ್ಬಂದಿ ನೇಮಕಾತಿ ಆಯೋಗದ ಅಧಿಕೃತ ವೆಬ್‌ಸೈಟ್‌ https://ssc.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 25,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
SSC released recruitment 2020 notification for 283 hindi translator posts. Interested candidates can apply through online before July 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+