SSC Recruitment 2022 : 24369 ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಬ್ಬಂದಿ ನೇಮಕಾತಿ ಆಯೋಗವು 24369 ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 27,2022 ರಿಂದ ನವೆಂಬರ್ 30,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಸಿಬ್ಬಂದಿ ನೇಮಕಾತಿ ಆಯೋಗ : 24369 ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ

SSC ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

SSC ನೇಮಕಾತಿ 2022 ವಯೋಮಿತಿ :

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಜನವರಿ 1,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 23 ವರ್ಷ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

SSC ನೇಮಕಾತಿ 2022 ವೇತನದ ವಿವರ :

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

SSC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (ಪೇಪರ್-1), ಸಹಿಷ್ಣುತಾ ಪರೀಕ್ಷೆ (PET), ದೈಹಿಕ ಸಾಮರ್ಥ್ಯ ಪರೀಕ್ಷೆ (PST) (ಹವಾಲ್ದಾರ್ ಹುದ್ದೆಗಳಿಗೆ ಮಾತ್ರ), ವಿವರಣಾತ್ಮಕ ಪರೀಕ್ಷೆ (ಪೇಪರ್-2) ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

SSC ನೇಮಕಾತಿ 2022 ಅರ್ಜಿ ಶುಲ್ಕ :

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಡಿಸೆಂಬರ್ 1,2022ರೊಳಗೆ ಪಾವತಿಸಬೇಕಿರುತ್ತದೆ. ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ, ಮಹಿಳಾ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

SSC ನೇಮಕಾತಿ 2022 ಅರ್ಜಿ ಸಲ್ಲಿಕೆ :

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://ssc.nic.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 27,2022 ರಿಂದ ನವೆಂಬರ್ 30,2022ರ ರಾತ್ರಿ 11 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
SSC recruitment 2022 notification has been released for 24369 constable Posts. Candidates can apply before November 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X