SSC Recruitment 2022 : 4000ಕ್ಕೂ ಅಧಿಕ ಎಂಟಿಎಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಬ್ಬಂದಿ ನೇಮಕಾತಿ ಆಯೋಗವು 4000ಕ್ಕೂ ಅಧಿಕ ಮಲ್ಟಿ ಟಾಸ್ಕಿಂಗ್‌ ಸ್ಟಾಫ್‌ (ನಾನ್‌ ಟೆಕ್ನಿಕಲ್) ಗ್ರೂಪ್‌ ಸಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿ : 4000ಕ್ಕೂ ಅಧಿಕ ಹುದ್ದೆಗಳ ನೇಮಕಾತಿ

ಅಧಿಸೂಚನೆಯನ್ನು ಓದಿದ ನಂತರ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 22,2022 ರಿಂದ ಏಪ್ರಿಲ್ 30,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

SSC MTS ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

SSC MTS ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಮಲ್ಟಿ ಟಾಸ್ಕಿಂಗ್‌ ಸ್ಟಾಫ್‌ (ನಾನ್‌ ಟೆಕ್ನಿಕಲ್) ಗ್ರೂಪ್‌ ಸಿ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

SSC MTS ನೇಮಕಾತಿ 2022 ವಯೋಮಿತಿ :

SSC MTS ನೇಮಕಾತಿ 2022 ವಯೋಮಿತಿ :

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಮಲ್ಟಿ ಟಾಸ್ಕಿಂಗ್‌ ಸ್ಟಾಫ್‌ (ನಾನ್‌ ಟೆಕ್ನಿಕಲ್) ಗ್ರೂಪ್‌ ಸಿ ಹುದ್ದೆಗಳಿಗೆ ಜನವರಿ 1,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

SSC MTS ನೇಮಕಾತಿ 2022 ವೇತನದ ವಿವರ :

SSC MTS ನೇಮಕಾತಿ 2022 ವೇತನದ ವಿವರ :

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಮಲ್ಟಿ ಟಾಸ್ಕಿಂಗ್‌ ಸ್ಟಾಫ್‌ (ನಾನ್‌ ಟೆಕ್ನಿಕಲ್) ಗ್ರೂಪ್‌ ಸಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ ಆಯೋಗದ ಅನುಸಾರ ವೇತನವನ್ನು ನೀಡಲಾಗುವುದು.

SSC MTS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

SSC MTS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಮಲ್ಟಿ ಟಾಸ್ಕಿಂಗ್‌ ಸ್ಟಾಫ್‌ (ನಾನ್‌ ಟೆಕ್ನಿಕಲ್) ಗ್ರೂಪ್‌ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (ಪೇಪರ್-1), ಸಹಿಷ್ಣುತಾ ಪರೀಕ್ಷೆ (PET), ದೈಹಿಕ ಸಾಮರ್ಥ್ಯ ಪರೀಕ್ಷೆ (PST) (ಹವಾಲ್ದಾರ್ ಹುದ್ದೆಗಳಿಗೆ ಮಾತ್ರ), ವಿವರಣಾತ್ಮಕ ಪರೀಕ್ಷೆ (ಪೇಪರ್-2) ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

SSC MTS ನೇಮಕಾತಿ 2022 ಪ್ರಮುಖ ದಿನಾಂಕಗಳು :

SSC MTS ನೇಮಕಾತಿ 2022 ಪ್ರಮುಖ ದಿನಾಂಕಗಳು :

ಆನ್‌ಲೈನ್‌ ಅರ್ಜಿ ಸಲ್ಲಿಕೆ ಆರಂಭಿಕ ದಿನಾಂಕ : 22-03-2022
ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 30-04-2022
ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ: 02-05-2022
ಆಫ್‌ಲೈನ್‌ ಚಲನ್‌ ಜೆನೆರೇಟ್ ಮಾಡಲು ಕೊನೆ ದಿನಾಂಕ: 03-05-2022
ಆಫ್‌ಲೈನ್‌ ಮೂಲಕ ಶುಲ್ಕ ಪಾವತಿಗೆ ಕೊನೆ ದಿನಾಂಕ: 04-05-2022
ಅಪ್ಲಿಕೇಶನ್‌ ತಿದ್ದುಪಡಿಗೆ ಅವಕಾಶ ನೀಡುವ ದಿನಾಂಕ : ಮೇ 05 ರಿಂದ 09, 2022
ಪೇಪರ್-1 ಕಂಪ್ಯೂಟರ್ ಆಧಾರಿತ ಪರೀಕ್ಷೆ ದಿನಾಂಕ: ಜುಲೈ 2022
ಪೇಪರ್-2 ವಿವರಣಾತ್ಮಕ ಪರೀಕ್ಷೆ ದಿನಾಂಕ: ಶೀಘ್ರದಲ್ಲಿ ತಿಳಿಸಲಾಗುವುದು

SSC MTS ನೇಮಕಾತಿ 2022 ಅರ್ಜಿ ಶುಲ್ಕ :

SSC MTS ನೇಮಕಾತಿ 2022 ಅರ್ಜಿ ಶುಲ್ಕ :

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಮಲ್ಟಿ ಟಾಸ್ಕಿಂಗ್‌ ಸ್ಟಾಫ್‌ (ನಾನ್‌ ಟೆಕ್ನಿಕಲ್) ಗ್ರೂಪ್‌ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮೇ 2,2022ರೊಳಗೆ ಪಾವತಿಸಬೇಕಿರುತ್ತದೆ. ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ, ಮಹಿಳಾ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

SSC MTS ನೇಮಕಾತಿ 2022 ಅರ್ಜಿ ಸಲ್ಲಿಕೆ :

SSC MTS ನೇಮಕಾತಿ 2022 ಅರ್ಜಿ ಸಲ್ಲಿಕೆ :

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಮಲ್ಟಿ ಟಾಸ್ಕಿಂಗ್‌ ಸ್ಟಾಫ್‌ (ನಾನ್‌ ಟೆಕ್ನಿಕಲ್) ಗ್ರೂಪ್‌ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://ssc.nic.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್ 22,2022 ರಿಂದ ಏಪ್ರಿಲ್ 30,2022ರ ರಾತ್ರಿ 11 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳಿಗೆ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SSC recruitment 2022 notification has been released for 4000 plus MTS havaldar Posts. Interested candidates can apply before April 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+