SSCKKR Recruitment 2021: 225 ಡಿಇಓ, ಜ್ಯೂನಿಯರ್ ಇಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟಾಫ್ ಸೆಲೆಕ್ಷನ್ ಕಮಿಷನ್, ಕರ್ನಾಟಕ ಕೇರಳ ರೀಜಿಯನ್ (ಎಸ್‌ಎಸ್‌ಸಿಕೆಕೆಆರ್) 225 ಡಿಇಓ, ಜ್ಯೂನಿಯರ್ ಇಂಜಿನಿಯರ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಎಸ್‌ಎಸ್‌ಸಿಕೆಕೆಆರ್ ನಲ್ಲಿ 225 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಡಿಪ್ಲೋಮಾ, ಪದವಿ, 10ನೇ ತರಗತಿ, 12ನೇ ತರಗತಿ, ಕಾನೂನು ಪದವಿ, ಬಿ.ಎಸ್ಸಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ,ಪಂ/ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ssckkr.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
Staff selection commission karnataka kerala region recruitment 2021 notification has been released for 225 DEO, Junior Engineer And Various Posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+