SSLR: 2055 ಭೂಮಾಪಕ ಹುದ್ದೆಗಳ ನೇಮಕಾತಿ

ರಾಜ್ಯದಲ್ಲಿ ಪೋಡಿ ಮುಕ್ತ ಅಭಿಯಾನ ಯೋಜನೆಯನ್ನು ಅನುಷ್ಟಾನಗೊಳಿಸುವ ಹಾಗೂ 11-ಇ ನಕ್ಷೆ, ತತ್ಕಾಲ್ ಪೋಡಿ ಪ್ರಕರಣಗಳ ಅಳತೆ ಕಾರ್ಯ ನಿರ್ವಹಿಸಿ ನಕ್ಷೆಯನ್ನು ವಿಳಂಬವಿಲ್ಲದೆ ಒದಗಿಸುವ ಸಲುವಾಗಿ 6770 ಅರ್ಹ ಅಭ್ಯರ್ಥಿಗಳಿಗೆ ಭೂಮಾಪನ ಪರವಾನಗಿ ನೀಡಲು ಸರ್ಕಾರದ ಅನುಮೋದನೆ ದೊರೆತಿರುತ್ತದೆ. ಆದ್ದರಿಂದ 2055 ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್‌ಲೈನ್‌ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಭೂಮಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ…ಜ.21ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಭೂಮಾಪಕ
Organisation ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ
Educational Qualification ದ್ವಿತೀಯ ಪಿಯುಸಿ/12ನೇ ತರಗತಿ, ಡಿಪ್ಲೋಮಾ, ಬಿ.ಇ/ಬಿ.ಟೆಕ್
Job Location ಕರ್ನಾಟಕ
Application End Date January 21, 2020

ವಿದ್ಯಾರ್ಹತೆ:

ಕನಿಷ್ಟ ಪದವಿ ಪೂರ್ವಶಿಕ್ಷಣ (ಪಿ.ಯು.ಸಿ) ಅಥವಾ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ನಡೆಸುವ 12ನೇ ತರಗತಿ ಸಿ.ಬಿ.ಎಸ್‌.ಇ ಅಥವಾ ಐ.ಸಿ.ಎಸ್‌.ಇ ಇವುಗಳಲ್ಲಿ ವಿಜ್ಞಾನ ವಿಷಯವನ್ನು ಪಡೆದು ಗಣಿತ ವಿಷಯದಲ್ಲಿ 60%ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು ಅಥವಾ ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ (ಸಿವಿಲ್) ಅಥವಾ ಬಿ.ಟೆಕ್ ಅಥವಾ ಸಿವಿಲ್ ಇಂಜಿನಿಯರಿಂಗ್‌ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರುವವರೂ ಸಹ ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಸರ್ಕಾದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ "ಲ್ಯಾಂಡ್ ಅಂಡ್ ಸಿಟಿ ಸರ್ವೆ"ಯಲ್ಲಿ ಪದವಿ ಪೂರ್ವ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ "ಐ.ಟಿ.ಐ ಇನ್ ಸರ್ವೆ ಟ್ರೇಡ್‌" ನಲ್ಲಿ ಉತ್ತೀರ್ಣರಾಗಿರಬೇಕು ಅಥವಾ ರಾಜ್ಯ ಸರ್ಕಾರದ ಭೂಮಾನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಅಥವಾ ಸರ್ವೆ ಆಫ್ ಇಂಡಿಯಾ ಅಥವಾ ಸರ್ಕಾರಿ ವಲಯಕ್ಕೆ ಒಳಪಟ್ಟ ಸಂಸ್ಥೆಗಳಲ್ಲಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕನಿಷ್ಟ 10 ವರ್ಷಗಳ ಭೂಮಾಪನ ಸೇವೆ ಸಲ್ಲಿಸಿ ನಿವೃತ್ತರಾದವರು ಸಹ ಪರವಾನಗಿ ಪಡೆಯಲು ಅರ್ಹರಿರುತ್ತಾರೆ.

ವಯೋಮಿತಿ:

ಜನವರಿ 21,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಾಡಕಛೇರಿಯಲ್ಲಿ ಚುನಾವಣಾ ಗುರುತಿನ ಚೀಟಿ ಸಂಖ್ಯೆ ಅಥವಾ ಆಧಾರ್ ಸಂಖ್ಯೆಯನ್ನು ನೀಡಿ ನಿಗದಿತ ಶುಲ್ಕವನ್ನು ಪಾವತಿಸಿಸದಾಗ ನೀಡುವ ಸ್ವೀಕೃತಿ ಪತ್ರವನ್ನು ಜೊತೆಯಲ್ಲಿಟ್ಟುಕೊಂಡು ಇಲಾಖಾ ವೆಬ್‌ಸೈಟ್‌ http://landrecords.karnataka.gov.in/Lsrecruitment/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ದಿನಾಂಕ 21.1.2020ರ ಸಂಜೆ 5:00 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
SSLR karnataka recruitment 2019 notification has been released in official website for the recruitment of 2055 land surveyor posts. Interested candidates can apply before 21st January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X