ಭೂಮಾಪನ ಕಂದಾಯ ಮತ್ತು ಭೂದಾಖಲೆಗಳ ಇಲಾಖೆ ನೇಮಕಾತಿ ಅಧಿಸೂಚನೆ 2021 ಅನ್ನು ಬಿಡುಗಡೆ ಮಾಡಿದೆ. ಇಲಾಖೆಯಲ್ಲಿ 3,000 ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.
ಕರ್ನಾಟಕದಾದ್ಯಂತ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಡಿಸೆಂಬರ್ 1, 2021 ರಿಂದ ಪ್ರಾರಂಭವಾಗಿ ಡಿಸೆಂಬರ್ 31, 2021 ರಂದು ಕೊನೆಗೊಳ್ಳುವುದಾಗಿ ತಿಳಿಸಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ಜನವರಿ 21,2022ರ ಸಂಜೆ 5 ಗಂಟೆವರೆಗೆ ವಿಸ್ತರಿಸಲಾಗಿದೆ. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

SSLR Karnataka ನೇಮಕಾತಿ 2021 ವಿದ್ಯಾರ್ಹತೆ :
ಭೂಮಾಪನ ಕಂದಾಯ ಮತ್ತು ಭೂದಾಖಲೆಗಳ ಇಲಾಖೆ ನೇಮಕಾತಿಯ ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ, ಬಿ.ಇ/ಬಿ.ಟೆಕ್, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು.
SSLR Karnataka ನೇಮಕಾತಿ 2021 ವಯೋಮಿತಿ :
ಭೂಮಾಪನ ಕಂದಾಯ ಮತ್ತು ಭೂದಾಖಲೆಗಳ ಇಲಾಖೆ ನೇಮಕಾತಿಯ ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳಿಗೆ ಡಿಸೆಂಬರ್ 31,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
SSLR Karnataka ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :
ಭೂಮಾಪನ ಕಂದಾಯ ಮತ್ತು ಭೂದಾಖಲೆಗಳ ಇಲಾಖೆ ನೇಮಕಾತಿಯ ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
SSLR Karnataka ನೇಮಕಾತಿ 2021 ವೇತನ :
ಭೂಮಾಪನ ಕಂದಾಯ ಮತ್ತು ಭೂದಾಖಲೆಗಳ ಇಲಾಖೆ ನೇಮಕಾತಿಯ ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
SSLR Karnataka ನೇಮಕಾತಿ 2021 ಅರ್ಜಿ ಶುಲ್ಕ :
ಭೂಮಾಪನ ಕಂದಾಯ ಮತ್ತು ಭೂದಾಖಲೆಗಳ ಇಲಾಖೆ ನೇಮಕಾತಿಯ ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ ಎಂದು ಅಧಿಸೂಚನೆಯನ್ನು ಓದಬಹುದು.
SSLR Karnataka ನೇಮಕಾತಿ 2021 ಅರ್ಜಿ ಸಲ್ಲಿಕೆ:
ಭೂಮಾಪನ ಕಂದಾಯ ಮತ್ತು ಭೂದಾಖಲೆಗಳ ಇಲಾಖೆ ನೇಮಕಾತಿಯ ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://landrecords.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 21,2022ರ ಸಂಜೆ 5ರೊಳಗೆ ಅರ್ಜಿಯನ್ನು ತಲುಪಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಮತ್ತು ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಯ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











