ಎಸ್ ಎಸ್ ಸಿ: ಭಾಷಾಂತರಕಾರರ ಹುದ್ದೆಗೆ ಅಧಿಸೂಚನೆ

ಕಿರಿಯ ಹಿಂದಿ ಭಾಷಾಂತರಕಾರ, ಕಿರಿಯ ಭಾಷಾಂತರಕಾರ, ಹಿರಿಯ ಹಿಂದಿ ಭಾಷಾಂತರಕಾರ ಮತ್ತು ಹಿಂದಿ ಪ್ರಾಧ್ಯಾಪಕರ ನೇಮಕಾತಿಯನ್ನು ಪರೀಕ್ಷೆ ಮೂಲಕ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.

ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ ಎಸ್ ಸಿ) ಭಾಷಾಂತರಕಾರರ ಹುದ್ದೆ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಹಿಂದಿ ಭಾಷಾಂತರಕಾರ, ಕಿರಿಯ ಭಾಷಾಂತರಕಾರ, ಹಿರಿಯ ಹಿಂದಿ ಭಾಷಾಂತರಕಾರ ಮತ್ತು ಹಿಂದಿ ಪ್ರಾಧ್ಯಾಪಕರ ಹುದ್ದೆಗಳನ್ನು ಪರೀಕ್ಷೆ ಮೂಲಕ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.

ಎಸ್ ಎಸ್ ಸಿ ಪರೀಕ್ಷೆ

ಜೂನ್ ತಿಂಗಳಲ್ಲಿ ಎಸ್ ಎಸ್ ಸಿ ಪರೀಕ್ಷೆ ನಡೆಯಲಿದ್ದು, ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 05 ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 05 ರ ಸಂಜೆ 05:00 ಗಂಟೆ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಭಾಷಾಂತರಕಾರರ ನೇಮಕಾತಿ

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ; ಮೇ 05 , 2017
ಪರೀಕ್ಷಾ ದಿನಾಂಕ: ಜೂನ್ 15 , 2017

ಅರ್ಹತೆ

ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಜನವರಿ 2017 ಕ್ಕೆ 30 ವರ್ಷ ಮೀರಿರಬಾರದು.

ವಿದ್ಯಾರ್ಹತೆ

ಹುದ್ದೆಗಳಿಗೆ ಸಂಬಂಧಪಟ್ಟ ಹಾಗೆ ವಿದ್ಯಾರ್ಹತೆ ಕೇಳಲಾಗಿದೆ.

  • ಹಿರಿಯ ಭಾಷಾಂತರಕಾರ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
  • ಡಿಪ್ಲೊಮಾ ಅಥವಾ ಭಾಷಾಂತರ ವಿಷಯದಲ್ಲಿ ಸರ್ಟಿಫಿಕೇಟ್ ಕೋರ್ಸ್ ಪೂರ್ಣಗೊಳಿಸಿರಬೇಕು.

ಸೂಚನೆ

ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಅರ್ಜಿ ಹಾಕಲು ಅವಕಾಶವಿರುವುದಿಲ್ಲ.

ಅಭ್ಯರ್ಥಿಗಳ ಆಯ್ಕೆ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಲಿಖಿತ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಹೊಂದಿದ್ದು ಮೊದಲ ಪತ್ರಿಕೆ ಬಹು ಆಯ್ಕೆಯ ಪ್ರಶ್ನೆಗಳಿಂದ ಕೂಡಿರುತ್ತದೆ. ಎರಡನೇ ಪತ್ರಿಕೆಯು ಡಿಸ್ಕ್ರಿಪ್ಟಿವ್ ಆಗಿದೆ.

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಬಹುದಾಗಿದ್ದು, ಎಸ್ ಎಸ್ ಸಿ ಅಧಿಕೃತ ವೆಬ್ಸೈಟ್ ವಿಳಾಸದಲ್ಲಿ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಆರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು ₹100 ಶುಲ್ಕ ಪಾವತಿಸಬೇಕು.
  • ಎಸ್‌ಸಿ/ಎಸ್‌ಟಿ/ ಮಹಿಳಾ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ
  • ಶುಲ್ಕವನ್ನು ನೆಟ್ ಬ್ಯಾಂಕಿಂಗ್ ಅಥವಾ ಎಸ್ ಬಿ ಐ ನಲ್ಲಿ ಚಲನ್ ಮೂಲಕ ಪಾವತಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ssc.nic.in ವೆಬ್ಸೈಟ್ ವಿಳಾಸ ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
An employment notification has been released by the Staff Selection Commission (SSC), inviting eligible candidates for the combined recruitment of Junior Hindi Translator, Junior Translator, Senior Hindi Translator and Hindi Pradhyapak Examination, 2017.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X