10899 ಪೌರಕಾರ್ಮಿಕರ ನೇಮಕಾತಿಗೆ ಗ್ರೀನ್ ಸಿಗ್ನಲ್

Posted By:

ಬೆಂಗಳೂರು ಬಿಬಿಎಂಪಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಅವಶ್ಯವಿರುವ ಸುಮಾರು 11 ಸಾವಿರ ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ನೇಮಕಗೊಳ್ಳುವ ಎಲ್ಲಾ ಪೌರಕಾರ್ಮಿಕರಿಗೂ ಮಾಸಿಕ 25000 ಸಾವಿರ ವೇತನ ನೀಡುಲು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

10899 ಪೌರಕಾರ್ಮಿಕರ ನೇಮಕಾತಿ

ನೇಮಕಾತಿ ಮಾಡಿಕೊಳ್ಳುವಾಗ ಹಾಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ಪೌರಕಾರ್ಮಿಕರ ವಿವಿಧ ಬೇಡಿಕೆಗಳಿಗೂ ಹಸಿರು ನಿಶಾನೆ ನೀಡಲಾಗಿದೆ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ಕಾಯಂ ನೌಕರರಿಗೆ ₹25,000 ವೇತನ ಸಿಗಲಿದೆ. ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನೀಡುವ ₹17,000 ಸಂಭಾವನೆಯನ್ನು ಇನ್ನು ಮುಂದೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಹುದ್ದೆಗಳ ವಿವರ

ಬಿಬಿಎಂಪಿಯಲ್ಲಿ ಒಟ್ಟು 5486 ಹುದ್ದೆಗಳು ಖಾಲಿ ಇದ್ದು, ರಾಜ್ಯದ ಇತರ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ, ಪಂಚಾಯಿತಿಗಳಲ್ಲಿ 5413 ಹುದ್ದೆಗಳು ಖಾಲಿ ಇದೆ. ಒಟ್ಟಾರೆ 10899 ಹುದ್ದೆಗಳು ಶೀಘ್ರದಲ್ಲೆ ಭರ್ತಿಯಾಗಲಿವೆ.

English summary
The government has decided to fill 10,899 civic labor posts in various urban local bodies, including the huge Bangalore Metropolitan Corporation.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia