ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನೇಮಕಾತಿ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೂಕ್ತ ಅರ್ಜಿ ನಮೂನೆಯನ್ನು ಉಡುಪಿ ಜಿಲ್ಲಾ ಕೋರ್ಟ್ ವೆಬ್ ಸೈಟ್ ನಲ್ಲಿ ಪಡೆದುಕೊಂಡು ನಿಗದಿತ ದಿನಾಂಕ 21 ಆಗಸ್ಟ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಉಡುಪಿ ಜಿಲ್ಲಾ ಮತ್ತು ಸತ್ರಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೂಕ್ತ ಅರ್ಜಿ ನಮೂನೆಯನ್ನು ಉಡುಪಿ ಜಿಲ್ಲಾ ಕೋರ್ಟ್ ವೆಬ್ ಸೈಟ್ ನಲ್ಲಿ ಪಡೆದುಕೊಂಡು ನಿಗದಿತ ದಿನಾಂಕ 21 ಆಗಸ್ಟ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಉಡುಪಿ ನ್ಯಾಯಾಲಯದಲ್ಲಿ ನೇಮಕಾತಿ

ಹುದ್ದೆಗಳ ವಿವರ

ಶೀಘ್ರಲಿಪಿಗಾರ-04 ಹುದ್ದೆಗಳು
ವೇತನ ಶ್ರೇಣಿ: ರೂ.14550-26700 ಹಾಗೂ ಇತರ ಭತ್ಯೆಗಳೊಂದಿಗೆ
ಶೈಕ್ಷಣಿಕ ವಿದ್ಯಾರ್ಹತೆ

  • ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು.
  • ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಹೊಂದಿರಬೇಕು.
  • ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿ ನಡೆಸುವ ಸೆಕ್ರೆಟೆರಿಯಲ್ ಪ್ರ್ಯಾಕ್ಟೀಸ್ ಪಠ್ಯಕ್ರಮದ ಡಿಪ್ಲೊಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯಗಳನ್ನಾಗಿ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ.

ಆಯ್ಕೆ ವಿಧಾನ

ಮೇಲೆ ಹೇಳಿದ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಪ್ರತಿ ನಿಮಿಷಕ್ಕೆ 120 ಪದಗಳ ವೇಗದಲ್ಲಿ 5 ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು,ಉಕ್ತಲೇಖನವನ್ನು 45 ನಿಮಿಷಗಳಲ್ಲಿ ತರ್ಜುಮೆ ಮಾಡಿ ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

ಬೆರಳಚ್ಚುಗಾರ ಹುದ್ದೆಗಳ ಸಂಖ್ಯೆ: 12

ವೇತನ ಶ್ರೇಣಿ: ರೂ.11600-21000 ಹಾಗೂ ಇತರ ಭತ್ಯೆಗಳೊಂದಿಗೆ.

ಶೈಕ್ಷಣಿಕ ವಿದ್ಯಾರ್ಹತೆ

  • ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು.
  • ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಹೊಂದಿರಬೇಕು.

ಆಯ್ಕೆ ವಿಧಾನ

ಮೇಲೆ ಹೇಳಿದ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನ ಕೊಡುವ ವಿಷಯವನ್ನುಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅಯ್ಕೆ ಮಾಡಲಾಗುವುದು.

ಬೆರಳಚ್ಚು ನಕಲುಗಾರ-07 ಹುದ್ದೆಗಳು

ವೇತನ ಶ್ರೇಣಿ: ವೇತನ ಶ್ರೇಣಿ: ರೂ.11600-21000 ಹಾಗೂ ಇತರ ಭತ್ಯೆಗಳೊಂದಿಗೆ.

ವಿದ್ಯಾರ್ಹತೆ

  • ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 35, 2A, 2B, 3A, 3B ಅಭ್ಯರ್ಥಿಗಳಿಗೆ 18 ರಿಂದ 38, ಹಾಗೂ ಎಸ್ಸಿ ಮತ್ತು ಎಸ್ಟಿ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 40 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಬೆರಳಚ್ಚು ಮಾಡಿಸಿ ಅಥವಾ ಗಣಕೀಕೃತ ಮಾಡಿಸಿ ತನ್ನ ಕೈಬರವಣಿಗೆಯಲ್ಲಿ ಭರ್ತಿ ಮಾಡಿ ಸಲ್ಲಿಸತಕ್ಕದ್ದು. ಅರ್ಜಿಯೊಂದಿಗೆ ಭಾವಚಿತ್ರ ಮತ್ತು ಸೂಕ್ತ ದಾಖಲೆಗಳ ಪ್ರತಿಯನ್ನು ಲಗತ್ತಿಸತಕ್ಕದ್ದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಃ 21-08-2017, ಸಂಜೆ 5-00 ಘಂಟೆ

ಅರ್ಜಿ ಸಲ್ಲಿಸಬೇಕಾದ ವಿಳಾಸ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಜಿಲ್ಲೆ, ಉಡುಪಿ.

ಹೆಚ್ಚಿನ ಮಾಹಿತಿಗಾಗಿ ecourts.gov.in ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
District & Sessions Court, Udupi has announced notification for the recruitment of Stenographer, Typist & Typist-Copyist vacancies. Eligible candidates may apply on or before 21-08-2017 till 05:00 PM.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X