ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನೇಮಕಾತಿ

ಎಸ್ ಎಸ್ ಎಲ್ ಸಿ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಮತ್ತು ಇತರೇ ಮಾಹಿತಿಯನ್ನು ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿ ಜೂನ್ 22 ರೊಳಗೆ ಸಲ್ಲಿಸತಕ್ಕದ್ದು.

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಯಚೂರು ಘಟಕದಲ್ಲಿ ಶೀಘ್ರಲಿಪಿಗಾರ, ಬೆಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ಚಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಮತ್ತು ಇತರೇ ಮಾಹಿತಿಯನ್ನು ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿ ಜೂನ್ 22 ರೊಳಗೆ ಸಲ್ಲಿಸತಕ್ಕದ್ದು.

ಹುದ್ದೆಗಳ ವಿವರ

ಶೀಘ್ರಲಿಪಿಗಾರ ಹುದ್ದೆಗಳ ಸಂಖ್ಯೆಃ 10
ವೇತನ ಶ್ರೇಣಿ: ರೂ.14550-26700 ಹಾಗೂ ಇತರ ಭತ್ಯೆಗಳೊಂದಿಗೆ

ಶೈಕ್ಷಣಿಕ ವಿದ್ಯಾರ್ಹತೆ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಹೊಂದಿರಬೇಕು.

ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರ ನೇಮಕಾತಿ

ಆಯ್ಕೆ ವಿಧಾನ

ಮೇಲೆ ಹೇಳಿದ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಪ್ರತಿ ನಿಮಿಷಕ್ಕೆ 120 ಪದಗಳ ವೇಗದಲ್ಲಿ 5 ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು,ಉಕ್ತಲೇಖನವನ್ನು 45 ನಿಮಿಷಗಳಲ್ಲಿ ತರ್ಜುಮೆ ಮಾಡಿ ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಮೆರಿಟ್ ಆಧಾರದ ಮೇಲೆ 1:5 ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ಬೆರಳಚ್ಚುಗಾರ ಹುದ್ದೆಗಳ ಸಂಖ್ಯೆ: 10

ವೇತನ ಶ್ರೇಣಿ: ರೂ.11600-21000 ಹಾಗೂ ಇತರ ಭತ್ಯೆಗಳೊಂದಿಗೆ.

ಬೆರಳಚ್ಚು ನಕಲುಗಾರರು: ಸಂಖ್ಯೆ: 09

ವೇತನ ಶ್ರೇಣಿ: ರೂ.11600-21000/-

ಶೈಕ್ಷಣಿಕ ವಿದ್ಯಾರ್ಹತೆ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಹೊಂದಿರಬೇಕು.

ಆಯ್ಕೆ ವಿಧಾನ

ಮೇಲೆ ಹೇಳಿದ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನ ಕೊಡುವ ವಿಷಯವನ್ನುಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅಯ್ಕೆ ಮಾಡಲಾಗುವುದು.

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ

ಆಯ್ಕೆಯಾದ ಅಭ್ಯರ್ಥಿಗಳು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಸಿವಿಲ್ ಸೇವಾ ನಿಯಮಗಳು, 2012 ಹಾಗೂ ತಿದ್ದುಪಡಿ ನಿಯಮಗಳು, 2015ರನ್ವಯ ಪ್ರತಿಶತ 60 ರಂತೆ ಅಂಕಗಳನ್ನು ಪಡೆದು ಪರಿವೀಕ್ಷಣಾ ಅವಧಿಯೊಳಗೆ ಉತ್ತೀರ್ಣರಾಗತಕ್ಕದ್ದು.

ವಯೋಮಿತಿ

22-06-2017 ರಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು,
ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗ: 35
ಪ್ರವರ್ಗ 2ಎ, 2ಬಿ, 3ಎ, 3ಬಿ: 38 ವರ್ಷ
ಪ.ಜಾ, ಪ.ಪಂ, ಪ್ರ-1 : 40 ವರ್ಷ

ಪರಿವೀಕ್ಷಣಾ ಅವಧಿ

ಆಯ್ಕೆಯಾದ ಅಭ್ಯಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977 ರ ಪ್ರಕಾರ 02 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ.

ಈ ಅವಧಿಯಲ್ಲಿ ಅಭ್ಯರ್ಥಿಗಳು ಅವರುಗಳ ಹುದ್ದೆಗೆ ನಿಗದಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ ಮತ್ತು ಕನ್ನಡ ಭಾಷಾ ಪರೀಕ್ಷೆಯಲ್ಲಿ ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಬೆರಳಚ್ಚು ಮಾಡಿಸಿ ಅಥವಾ ಗಣಕೀಕೃತ ಮಾಡಿಸಿ ತನ್ನ ಕೈಬರವಣಿಗೆಯಲ್ಲಿ ಭರ್ತಿ ಮಾಡಿ ಸಲ್ಲಿಸತಕ್ಕದ್ದು. ಅರ್ಜಿಯೊಂದಿಗೆ ಭಾವಚಿತ್ರ ಮತ್ತು ಸೂಕ್ತ ದಾಖಲೆಗಳ ಪ್ರತಿಯನ್ನು ಲಗತ್ತಿಸತಕ್ಕದ್ದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಃ 22-06-2017, ಸಂಜೆ 5-00 ಘಂಟೆ

ಅರ್ಜಿ ಸಲ್ಲಿಸಬೇಕಾದ ವಿಳಾಸ

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ರಾಯಚೂರು-584101

ಹೆಚ್ಚಿನ ಮಾಹಿತಿಗಾಗಿ ecourts.gov.in ಗಮನಿಸಿ

More News  

For Quick Alerts
ALLOW NOTIFICATIONS  
For Daily Alerts

English summary
RECRUITMENT NOTIFICATION FOR THE POST OF STENOGRAPHERS, TYPIST AND TYPIST-COPYIST FOR THE YEAR-2017
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+