ಟೆಲಿಕಮ್ಯುನಿಕೇಶನ್ಸ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಟಿಸಿಐಎಲ್) ನೇಮಕಾತಿ 28 ಜ್ಯೂನಿಯರ್ ಇಂಜಿನಿಯರ್, ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಟಿಸಿಐಎಲ್‌ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಏಪ್ರಿಲ್ 11,2019 ರೊಳಗೆ ಕಳುಹಿಸಬೇಕು ನಂತರ ಸಲ್ಲಿಸಿದ ಅರ್ಜಿಯ ಪ್ರಿಂಟೌಟ್ ಅನ್ನು ತೆಗೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 13,2019 ರೊಳಗೆ ಕಳುಹಿಸಬೇಕಿರುತ್ತದೆ.

| CRITERIA | DETAILS |
| Name Of The Posts | ಜ್ಯೂನಿಯರ್ ಇಂಜಿನಿಯರ್, ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ |
| Organisation | ಟೆಲಿಕಮ್ಯುನಿಕೇಶನ್ಸ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಟಿಸಿಐಎಲ್) |
| Educational Qualification | ಪದವಿ,ಡಿಪ್ಲೋಮ ಅಥವಾ ಎಂಸಿಎ |
| Job Location | ಭಾರತದೆಲ್ಲೆಡೆ |
| Salary Scale | ಅಸಿಸ್ಟೆಂಟ್ ,ಜ್ಯೂನಿಯರ್ ಇಂಜಿನಿಯರ್ -II(ಟೆಲಿಕಾಂ/ಐಟಿ) ಮತ್ತು ಜ್ಯೂನಿಯರ್ ಇಂಜಿನಿಯರ್ -II(ಸಿವಿಲ್ ) -28,000/-ರಿಂದ 74,000/-ರೂ ಮತ್ತು ಅಸಿಸ್ಟೆಂಟ್ ಇಂಜಿನಿಯರ್ (ಟೆಲಿಕಾಂ ಐಟಿ) ಮತ್ತು ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್)- 35,000/-ರಿಂದ 87,000/-ರೂ |
| Application Start Date | April 2, 2019 |
| Application End Date | April 11, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಪದವಿ, ಡಿಪ್ಲೋಮಾ ಮತ್ತು ಎಂಸಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಖಾಲಿ ಹುದ್ದೆಗಳ ವಿವರ:
| ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
| ಅಸಿಸ್ಟೆಂಟ್ | 6 |
| ಜ್ಯೂನಿಯರ್ ಇಂಜಿನಿಯರ್ -II (ಟೆಲಿಕಾಂ /ಐಟಿ) | 8 |
| ಅಸಿಸ್ಟೆಂಟ್ ಇಂಜಿನಿಯರ್ (ಟೆಲಿಕಾಂ /ಐಟಿ) | 2 |
| ಜ್ಯೂನಿಯರ್ ಇಂಜಿನಿಯರ್-II(ಸಿವಿಲ್) | 10 |
| ಅಸಿಸ್ಟೆಂಟ್ ಇಂಜಿನಿಯರ್(ಸಿವಿಲ್) | 2 |
| ಒಟ್ಟು | 28 |
ವಯೋಮಿತಿ:
ಹುದ್ದೆಗಳಿಗನುಸಾರ ಗರಿಷ್ಟ 35 ವರ್ಷ ಮತ್ತು 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇನದ ವಿವರ:
ಅಸಿಸ್ಟೆಂಟ್ ,ಜ್ಯೂನಿಯರ್ ಇಂಜಿನಿಯರ್ -II(ಟೆಲಿಕಾಂ/ಐಟಿ) ಮತ್ತು ಜ್ಯೂನಿಯರ್ ಇಂಜಿನಿಯರ್ -II(ಸಿವಿಲ್ ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 28,000/-ರಿಂದ 74,000/-ರೂ ಮತ್ತು ಅಸಿಸ್ಟೆಂಟ್ ಇಂಜಿನಿಯರ್ (ಟೆಲಿಕಾಂ ಐಟಿ) ಮತ್ತು ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 35,000/-ರಿಂದ 87,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು 1000/-ರೂ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಅರ್ಜಿ ಸಲ್ಲಿಸುವುದು ಹೇಗೆ:
ಅರ್ಹ ಅಭ್ಯರ್ಥಿಗಳು ಟೆಲಿಕಮ್ಯುನಿಕೇಶನ್ಸ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಟಿಸಿಐಎಲ್) ನ ಅಧಿಕೃತ ವೆಬ್‌ಸೈಟ್ https://www.tcil-india.com/index.php ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಏಪ್ರಿಲ್ 11.2019 ರೊಳಗೆ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿದ ಬಳಿಕ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಏಪ್ರಿಲ್ 13.2019 ರೊಳಗೆ ಕಳುಹಿಸಬೇಕಿರುತ್ತದೆ.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳಿಗೆ ಸಲ್ಲಿಸುವ ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











