ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

ಪದವಿ ಪಡೆದವರು ಮತ್ತು ಎಸ್ ಎಸ್ ಎಲ್ ಸಿ ಆದವರಿಗೆ ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ. ಆಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಖಾಲಿಯಿರುವ ಕಿರಿಯ ಸಹಾಯಕರು ಮತ್ತು ಅಟೆಂಡರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ಚಾನಿಸಲಾಗಿದೆ.

ಹುದ್ದೆಯ ವಿವರ

ಹುದ್ದೆಯ ಹೆಸರು: ಕಿರಿಯ ಸಹಾಯಕರು
ಹುದ್ದೆ ಸಂಖ್ಯೆ-63
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರು ಪದವಿ ಪಡೆದಿರಬೇಕು
ವೇತನ ಶ್ರೇಣಿ: ರೂ.20000 -36300 /-

ಹುದ್ದೆಯ ಹೆಸರು: ಅಟೆಂಡರ್
ಹುದ್ದೆ ಸಂಖ್ಯೆ: 11
ವಿದ್ಯಾರ್ಹತೆ: ಕನಿಷ್ಠ ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರಬೇಕು
ವೇತನ ಶ್ರೇಣಿ: ರೂ.14500 -26700 /-

ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

ವಯೋಮಿತಿ

ವಯೋಮಿತಿ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಟ ವಯೋಮಿತಿಯನ್ನು ಹೊಂದಿರಬೇಕು ಹಾಗೂ ನಿಗದಿತ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.

ವರ್ಗೀಕರಣದ ವಯೋಮಿತಿ
ಸಾಮಾನ್ಯ ವರ್ಗ- 18 ರಿಂದ 35 ವರ್ಷ
2ಎ, 2ಬಿ, 3ಎ, 3ಬಿ- 18 ರಿಂದ 38 ವರ್ಷ
ಪ.ಜಾ./ಪ.ಪಂ/ಪ್ರ-1- 18 ರಿಂದ 40 ವರ್ಷ

ಅರ್ಜಿ ಸಲ್ಲಿಕೆ

ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ಸೈಟ್ ವಿಳಾಸ www.bccbl.co.in ಗೆ ಭೇಟಿ ನೀಡಬೇಕು TBCCBANK RECRUITMENT 2017 ಎಂದು ಮೂಡುತ್ತದೆ ಮತ್ತು ಅಧಿಸೂಚನೆ/ ಪರೀಕ್ಷಾ ಶುಲ್ಕವಿವರಗಳು ಲಭ್ಯವಾಗಲಿದ್ದು, ಅಭ್ಯರ್ಥಿಗಳು ಅಧಿಸೂಚನೆಯಲ್ಲಿನ ವಿವರಗಳನ್ನು ಮತ್ತು ಅರ್ಜಿ ಸಲ್ಲಿಸುವ ಸೂಚನೆಗಳನ್ನು ತಪ್ಪದೇ ಓದಿಕೊಂಡು ಅದರಂತೆ ಆನ್-ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡತಕ್ಕದ್ದು.

ಅರ್ಜಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ತಾಂತ್ರಿಕ ತೊಂದರೆ ಅಥವಾ ಸಮಸ್ಯೆ ಎದುರಾದಲ್ಲಿ ಸಹಾಯವಾಣಿ 8951107408 ಅನ್ನು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 6:00 ಗಂಟೆವರೆಗೆ ಸಂಪರ್ಕಿಸಬಹುದಾಗಿದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 05-04-2017
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-04-2017
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27-04-2017

ಅರ್ಜಿ ಶುಲ್ಕ

ಕಿರಿಯ ಸಹಾಯಕ ಹುದ್ದೆಗೆ
ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ ರೂ.600/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.400/-

ಅಟೆಂಡರ್ ಹುದ್ದೆಗೆ
ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ ರೂ.400/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.300/-

ಶುಲ್ಕ ಪಾವತಿಸುವ ವಿಧಾನ

ಅರ್ಜಿ/ಪರೀಕ್ಷಾ ಶುಲ್ಕದ ಚಲನ್ ಡೌನ್ಲೋಡ್ ಮಾಡಿದ ನಂತರ ಕರ್ನಾಟಕ ರಾಜ್ಯದಲ್ಲಿನ ಯಾವುದೇ ಗಣಕೀಕೃತ ಭಾರತೀಯ ಅಂಚೆ ಕಛೇರಿಯ ಶಾಖೆಯಲ್ಲಿ (e-payment enabled post offices) ಸಂದಾಯ ಮಾಡತಕ್ಕದ್ದು. ಈ ವಿಧಾನ ಹೊರತುಪಡಿಸಿ ಬೇರೆ ಯಾವುದೇ ರೀತಿಯಲ್ಲಿ ಶುಲ್ಕ ಪಾವತಿಸಲು ಅವಕಾಶವಿರುವುದಿಲ್ಲ.

ಅಯ್ಕೆ ವಿಧಾನ
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಕರೆಪತ್ರಗಳ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಆದ್ಯತೆ
ಕಿರಿಯ ಸಹಾಯಕ ಹುದ್ದೆಗೆ

  • ಬ್ಯಾಂಕಿಂಗ್ ಕ್ಷೇತ್ರದಲ್ಲಿನ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
  • ಡಿಪ್ಲೊಮಾ ಇನ್ ಸೆಕ್ರೆಟಿರಿಯಲ್ ಪ್ರಾಕ್ಟೀಸ್ ಅಥವಾ ಡಿಪ್ಲೊಮಾ ಇನ್ ಬ್ಯಾಂಕಿಂಗ್ ಅಥವಾ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿರಬೇಕು
  • ಸಹಕಾರಿ ಬ್ಯಾಂಕುಗಳಲ್ಲಿ ಕೆಲಸ ಮಾಡಿದ ಅನುಭವ ಇರಬೇಕು

ಅಟೆಂಡರ್ ಹುದ್ದೆಗೆ
ಸಹಕಾರಿ ಬ್ಯಾಂಕುಗಳಲ್ಲಿ ಕೆಲಸ ಮಾಡಿದ ಅನುಭವ

ಸೂಚನೆ

ಅಭ್ಯರ್ಥಿಗಳು ಕರ್ನಾಟಕ ನಿವಾಸಿಗಳಾಗಿದ್ದು, ಕನ್ನಡ ಭಾಷೆ ಬರೆಯಲು ಮತ್ತು ಓದಲು ಬಲ್ಲವರಾಗಿರಬೇಕು

ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ವಿಳಾಸ ಗಮನಿಸಿ: www.bccbl.co.in

For Quick Alerts
ALLOW NOTIFICATIONS  
For Daily Alerts

English summary
The Bangalore city co-operative bank recruiting the second division clerks and attenders. candidates apply through online
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X