ಟ್ರೈಬಲ್ ಕಾರ್ಪೋರೇಟಿವ್ ಮಾರ್ಕೆಟಿಂಗ್ ಡೆವಲಪ್ಮೆಂಟ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಟ್ರೈಫೆಡ್) 30 ಪ್ರೊಕ್ಯುರ್ಮೆಂಟ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
ವಯೋಮಿತಿ:
ಕನಿಷ್ಟ 19 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,924/- ರಿಂದ 20,522/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಸಂದರ್ಶನದ ವಿವರ:
ಅರ್ಹ ಅಭ್ಯರ್ಥಿಗಳು ತಮ್ಮ ರೆಸ್ಯುಮೆಯೊಂದಿಗೆ ಅತ್ಯ ದಾಖಲೆಗಳನ್ನು ಲಗತ್ತಿಸಿ ನವೆಂಬರ್ 17,2020 ರಿಂದ ನವೆಂಬರ್ 25,2020ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 5:30ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ:
Shri V. Ramanathan,
Regional Manager,
NO.323/2. 2nd Floor,
Hosur Main Road,
Near Madiwala police station,
Madiwala,
Bangalore-560068.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











