ತುಮಕೂರು ಜಿಲ್ಲಾ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 16 ತಾಲ್ಲೂಕು ತಾಂತ್ರಿಕ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮಂದೆ ಓದಿ.

ವಿದ್ಯಾರ್ಹತೆ:
ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ತಾಲ್ಲೂಕು ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಕನಿಷ್ಟ 21 ರಿಂದ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://tumkurzillapanchayat.gov.in/index.html ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











