ತುಮಕೂರು ಜಿಲ್ಲಾ ನ್ಯಾಯಾಲಯ ನೇಮಕಾತಿ 2019: 13 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 13 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಆಸಕ್ತರು ಆನ್ ಲೈನ್ ಮೂಲಕ ಡಿಸೆಂಬರ್ 17,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ತುಮಕೂರು ಜಿಲ್ಲಾ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ 13 ಶೀಘ್ರಲಿಪಿಗಾರರ ನೇಮಕಾತಿ

CRITERIA DETAILS
Name Of The Posts ಶೀಘ್ರಲಿಪಿಗಾರ
Organisation ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
Educational Qualification ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ತುಮಕೂರು
Salary Scale ತಿಂಗಳಿಗೆ 27,650/- ರಿಂದ 52,650/-ರೂ
Application Start Date November 18, 2019
Application End Date December 17, 2019

ವಿದ್ಯಾರ್ಹತೆ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಅಭ್ಯರ್ಥಿಯು ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯಸ್ಸು ಸಾಮಾನ್ಯ ವರ್ಗದವರಿಗೆ 35 ವರ್ಷ, 2A,2B,3Bವರ್ಗದವರಿಗೆ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ರ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ವೇತನದ ವಿವರ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.

ಆಯ್ಕೆ ವಿಧಾನ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.

ನೇಮಕಾತಿ ಪ್ರಾಧಿಕಾರದಿಂದ ನೇಮಿಸಲಾದ ಪರೀಕ್ಷಕರು ಒಂದು ನಿಮಿಷಕ್ಕೆ 120 ಪದಗಳ ದರದಲ್ಲಿ ತಲಾ 05 ನಿಮಿಷಗಳ ಕನ್ನಡ ಮತ್ತು ಇಂಗ್ಲೀಷ್ ಉಕ್ತಲೇಖನವನ್ನು ನೀಡುವರು. ಅದನ್ನು ಅಭ್ಯರ್ಥಿಗಳು 45 ನಿಮಿಷಗಳಲ್ಲಿ ವಿಶೇಷ ತಂತ್ರಾಂಶದ ಗಣಕಯಂತ್ರದಲ್ಲಿ ಬೆರಳಚ್ಚು ಮಾಡತಕ್ಕದ್ದು. ಬೆರಳಚ್ಚುಯಂತ್ರದ ಕೀಲಿಮಣೆಯನ್ನು ಹೋಲುವ ತಂತ್ರಾಂಶವನ್ನು ಗಣಕಯಂತ್ರಗಳಿಗೆ ಅಳವಡಿಸಲಾಗುವುದು.

ಅರ್ಹತಾ ಪರೀಕ್ಷೆಗಳು ಗರಿಷ್ಟ 100 ಅಂಕಗಳನ್ನು ಹೊಂದಿದ್ದು, ಉತ್ತೀರ್ಣರಾಗಲು ಕನಿಷ್ಟ 50 ಅಂಕಗಳನ್ನು ನಿಗದಿಪಡಿಸಲಾಗಿರುತ್ತದೆ.

ನಿಗದಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿನ ಮತ್ತು ಅರ್ಹತಾ ಪರೀಕ್ಷೆಗಳ ಒಟ್ಟು ಅಂಕಗಳ ಶೇಕಡಾವಾರು ಮೊತ್ತದ ಆಧಾರದ ಮೇಲೆ ಒಂದು ಹುದ್ದೆಗೆ ೫ ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಲಾದ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ಸಂದರ್ಶನವು 5 ಅಂಕಗಳನ್ನು ಒಳಗೊಂಡಿರುತ್ತದೆ.

ನಿಗದಿತ ಶುಲ್ಕ ಹಾಗೂ ಪಾವತಿಸಬೇಕಾದ ವಿಧಾನ:

ಸಾಮಾನ್ಯ ವರ್ಗ,ಪ್ರವರ್ಗ-2A,2B, 3Aಮತ್ತು 3Bಗೆ ಸೇರಿದ ಅಭ್ಯರ್ಥಿಗಳಿಗೆರೂ.200/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ- 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆರೂ.100/-

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/tumakuru ರಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan downloadಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.

ಈ ರೀತಿ net banking/credit card/ debit card/challan downloadಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ Demand Draft, Postal Order, Money Order ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ತುಮಕೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ https://districts.ecourts.gov.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮುಖಾಂತರ ಅರ್ಜಿಗಳನ್ನು ದಿನಾಂಕ 18.11.2019 ರಿಂದ ದಿನಾಂಕ 17.12.2019 ರ ರಾತ್ರಿ 11:59 ರವರೆಗೆ ಮಾತ್ರ ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು

ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
District court of Tumkur recruitment 2019 notification has been released on official website for the recruitment of 13 stenographer posts. Interested candidates can apply through online before 17th december 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+