Tumkur District Court Recruitment 2022 : 51 ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 51 ಜವಾನ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 30,2022 ರಿಂದ ಜೂನ್ 15,2022ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ತುಮಕೂರು ಜಿಲ್ಲಾ ನ್ಯಾಯಲಯದಲ್ಲಿ ಉದ್ಯೋಗಾವಕಾಶ.. ಜೂ.15ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ :

ತುಮಕೂರು ಜಿಲ್ಲಾ ನ್ಯಾಯಾಲಯ ನೇಮಕಾತಿಯ ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ಹುದ್ದೆಗಳಿಗೆ ನೀಡಲಾಗುವ ವೇತನದ ವಿವರ :

ತುಮಕೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನೇಮಕಾತಿಯ ಜವಾನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 28,950/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ವಯೋಮಿತಿ :

ತುಮಕೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನೇಮಕಾತಿಯ ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಯ ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಆಯ್ಕೆಯ ವಿಧಾನ :

ತುಮಕೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನೇಮಕಾತಿಯ ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ತದನಂತರ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ತುಮಕೂರು ಜಿಲ್ಲಾ ನ್ಯಾಯಲಯದಲ್ಲಿ ಉದ್ಯೋಗಾವಕಾಶ.. ಜೂ.15ರೊಳಗೆ ಅರ್ಜಿ ಹಾಕಿ

ನಿಗದಿತ ಅರ್ಜಿ ಶುಲ್ಕ :

ತುಮಕೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನೇಮಕಾತಿಯ ಜವಾನ ಹುದ್ದೆಗಳಿಗೆ ಸಾಮಾನ್ಯ ವರ್ಗ, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಅರ್ಜಿ ಶುಲ್ಕ ಪಾವತಿಸಬೇಕಾದ ವಿಧಾನ :

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/tumkur-onlinerecruitment# ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan downloadಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.

ಈ ರೀತಿ net banking/credit card/ debit card/challan download ಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಜೂನ್ 17,2022ರೊಳಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು.

ಈ ಮೇಲಿನ ವಿಧಾನಗಳನ್ನು ಹೊರತು ಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್, ನಗದು, ಮನಿ ಆರ್ಡರ್ ಇವುಗಳ ರೂಪದಲ್ಲಿ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ :

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಬಳ್ಳಾರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/tumkur-onlinerecruitment# ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 30,2022 ರಿಂದ ಜೂನ್ 15,2022ರ ರಾತ್ರಿ 11:59ರೊಳಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಆನ್‌ಲೈನ್ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
District court of tumkur recruitment 2022 notification has been released for 51 peon posts. Interested candidates can apply through online before June 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+