Tumkur Zilla Panchayat Recruitment 2022 : 10 ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರು ಜಿಲ್ಲೆಯ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ತಾಲ್ಲೂಕು ಪಂಚಾಯಿತಿಗಳಿಗೆ ತಲಾ ಒಬ್ಬರಂತೆ 10 ಆಡಳಿತ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 14,2022 ರಿಂದ ಮಾರ್ಚ್ 31,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ತುಮಕೂರು ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ

Tumkur Zilla Panchayat ನೇಮಕಾತಿ 2022 ವಿದ್ಯಾರ್ಹತೆ :

ತುಮಕೂರು ಜಿಲ್ಲಾ ಪಂಚಾಯಿತಿ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಬಿ.ಕಾಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ನಲ್ಲಿ ಪರಿಣತಿಯನ್ನು ಹೊಂದಿರಬೇಕು.

Tumkur Zilla Panchayat ನೇಮಕಾತಿ 2022 ವಯೋಮಿತಿ :

ತುಮಕೂರು ಜಿಲ್ಲಾ ಪಂಚಾಯಿತಿ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾರ್ಚ್ 31,2022ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Tumkur Zilla Panchayat ನೇಮಕಾತಿ 2022 ವೇತನ :

ತುಮಕೂರು ಜಿಲ್ಲಾ ಪಂಚಾಯಿತಿ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

Tumkur Zilla Panchayat ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ತುಮಕೂರು ಜಿಲ್ಲಾ ಪಂಚಾಯಿತಿ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಬಂದ ಅರ್ಜಿಗಳನ್ನು ನಿಗಧಿಪಡಿಸಿದ ವಿದ್ಯಾರ್ಹತೆಗೆ ಅನುಗುಣವಾಗಿ ಮೆರಿಟ್ ಪಟ್ಟಿ ತಯಾರಿಸಿ, ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಟೈಪಿಂಗ್ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವ ಬಗ್ಗೆ ಪ್ರಾಯೋಗಿಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Tumkur Zilla Panchayat ನೇಮಕಾತಿ 2022 ಅರ್ಜಿ ಶುಲ್ಕ :

ತುಮಕೂರು ಜಿಲ್ಲಾ ಪಂಚಾಯಿತಿ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Tumkur Zilla Panchayat ನೇಮಕಾತಿ 2022 ಅರ್ಜಿ ಸಲ್ಲಿಕೆ :

ತುಮಕೂರು ಜಿಲ್ಲಾ ಪಂಚಾಯಿತಿ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://tumkurzillapanchayat.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್ 14,2022 ರಿಂದ ಮಾರ್ಚ್ 31,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Tumkur zilla panchayat recruitment 2022 notification has been released for 10 administrative assistant posts. Interested candidates can apply before March 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X