ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು: 34 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು 34 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಜನವರಿ 28,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕೃಷಿ ವಿಶ್ವವಿದ್ಯಾನಿಲಯದಲ್ಲಿ 34 ವಿವಿಧ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಜ್ಯೂನಿಯರ್ ಇಂಜಿನಿಯರ್, ಸ್ಟೆನೋಗ್ರಾಫರ್, ಫಾರ್ಮಾಸಿಸ್ಟ್, ಅಸಿಸ್ಟೆಂಟ್,ಲ್ಯಾಬೋರೇಟರಿ ಅಸಿಸ್ಟೆಂಟ್, ಫೀಲ್ಡ್ ಅಸಿಸ್ಟೆಂಟ್, ಕೇರ್ ಟೇಕರ್, ಟ್ರ್ಯಾಕ್ಟರ್ ಡ್ರೈವರ್, ಅಸಿಸ್ಟೆಂಟ್ ಕುಕ್ ಕಮ್ ಕೇರ್‌ಟೇಕರ್
Organisation ಕೃಷಿ ವಿಶ್ವವಿದ್ಯಾನಿಲಯ
Educational Qualification ಡಿಪ್ಲೋಮಾ,ಪದವಿ,ಹತ್ತನೇ ತರಗತಿ/ಎಸ್‌ಎಸ್‌ಎಲ್‌ಸಿ,7ನೇ ತರಗತಿ,
Job Location ಬೆಂಗಳೂರು (ಕರ್ನಾಟಕ)
Salary Scale ಹುದ್ದೆಗಳಿಗನುಸಾರ ವೇತನ
Application Start Date December 30, 2019
Application End Date January 28, 2020

ವಿದ್ಯಾರ್ಹತೆ:

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ನೇಮಕಾತಿಯ ವಿವಿಧ ಹುದ್ದೆಗಳಿಗೆ ಡಿಪ್ಲೋಮಾ, ಪದವಿ, ಹತ್ತನೇ ತರಗತಿ/10ನೇ ತರಗತಿ ಮತ್ತು 7ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು. ವೇತನ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಅಧಿಸೂಚನೆಯನ್ನು ಓದಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಪ್ರಾಯೋಗಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಪ್ರವರ್ಗ-2ಎ, 2ಬಿ, 3ಎ, 3ಬಿ ಯ ಅಭ್ಯರ್ಥಿಗಳು 300/-ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳು 600/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1,ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೃಷಿ ವಿಶ್ವವಿದ್ಯಾನಿಲಯ,ಬೆಂಗಳೂರಿನ ಅಧಿಕೃತ ವೆಬ್‌ಸೈಟ್‌ https://www.uasbangalore.edu.in/index.php/kannada-uas ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಜನವರಿ 28,2020ರೊಳಗೆ ರಿಜಿಸ್ಟರ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಸಬಹುದು.

ಕಚೇರಿಯ ವಿಳಾಸ:
ಆಡಳಿತಾಧಿಕಾರಿ,
ಕೃಷಿ ವಿಶ್ವವಿದ್ಯಾನಿಲಯ,
ಜಿಕೆವಿಕೆ, ಬೆಂಗಳೂರು,
ಕರ್ನಾಟಕ 560065.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
University of agricultural sciences, bangalore recruitment 2019 notification has been released in official website for the recruitment of 34 various posts. Interested candidates can apply before 28th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+