ಕೃಷಿ ವಿಶ್ವವಿದ್ಯಾನಿಲಯ ನೇಮಕಾತಿ: 7 ಹುದ್ದೆಗಳು..ತಿಂಗಳಿಗೆ 1,44,200/- ರಿಂದ 2,18,200/-ರೂ ವೇತನ

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು 7 ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಕೃಷಿ ವಿಶ್ವವಿದ್ಯಾನಿಲಯದಲ್ಲಿ 7 ಅಧಿಕಾರಿ ಹುದ್ದೆಗಳ ನೇಮಕಾತಿ

 

ಅರ್ಹ ಅಭ್ಯರ್ಥಿಗಳು ಫೆಬ್ರವರಿ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

CRITERIA DETAILS
Name Of The Posts ಅಧಿಕಾರಿ
Organisation ಕೃಷಿ ವಿಶ್ವವಿದ್ಯಾನಿಲಯ
Educational Qualification ಕೃಷಿ ವಿಜ್ಞಾನದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಾಕ್ಟರಲ್ ಪದವಿ/ಪಿ.ಹೆಚ್‌ಡಿ
Job Location ಬೆಂಗಳೂರು,ಚಿಂತಾಮಣಿ, ಮಂಡ್ಯ (ಕರ್ನಾಟಕ)
Salary Scale ತಿಂಗಳಿಗೆ 1,44,200/- ರಿಂದ 2,18,200/-ರೂ
Application Start Date January 16, 2020
Application End Date February 15, 2020

ವಿದ್ಯಾರ್ಹತೆ:

ಕೃಷಿ ವಿಜ್ಞಾನದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಾಕ್ಟರಲ್ ಪದವಿ/ ಪಿ.ಹೆಚ್‌ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ನೇಮಕಾತಿಯ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,44,200/- ರಿಂದ 2,18,200/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 2000/-ರೂ, ಓಬಿಸಿ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-೧ರ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ. ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

 

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೃಷಿ ವಿಶ್ವವಿದ್ಯಾನಿಲಯ,ಬೆಂಗಳೂರಿನ ಅಧಿಕೃತ ವೆಬ್‌ಸೈಟ್‌ https://www.uasbangalore.edu.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಫೆಬ್ರವರಿ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:

ಆಡಳಿತಾಧಿಕಾರಿ,

ಕೃಷಿ ವಿಶ್ವವಿದ್ಯಾನಿಲಯ,

ಜಿಕೆವಿಕೆ, ಬೆಂಗಳೂರು,

ಕರ್ನಾಟಕ 560065.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
University of agricultural sciences, bangalore recruitment 2020 notification has been released on official website for the recruitment of 7 officer posts. Interested candidates can apply through online before 15th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X