UAS Bangalore Recruitment 2022 : 19 ಸಹಾಯಕ ಪ್ರಾಧ್ಯಾಪಕ ಮತ್ತು ಫಾರ್ಮ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರಿನಲ್ಲಿ 19 ಸಹಾಯಕ ಪ್ರಾಧ್ಯಾಪಕ ಮತ್ತು ಫಾರ್ಮ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮಾರ್ಚ್ 9,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರಿನಲ್ಲಿ ಉದ್ಯೋಗಾವಕಾಶ

UAS Bangalore ನೇಮಕಾತಿ 2022 ವಿದ್ಯಾರ್ಹತೆ :

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಮತ್ತು ಫಾರ್ಮ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ಪಿಹೆಚ್‌.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

UAS Bangalore ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ಸಹಾಯಕ ಪ್ರಾಧ್ಯಾಪಕ - 15 ಹುದ್ದೆಗಳು
ಫಾರ್ಮ್ ಮ್ಯಾನೇಜರ್ - 4 ಹುದ್ದೆಗಳು
ಒಟ್ಟು 19 ಹುದ್ದೆಗಳು

UAS Bangalore ನೇಮಕಾತಿ 2022 ವಯೋಮಿತಿ :

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಗರಿಷ್ಟ 42 ವರ್ಷ ಮತ್ತು ಫಾರ್ಮ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 1 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

UAS Bangalore ನೇಮಕಾತಿ 2022 ವೇತನ :

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಮತ್ತು ಫಾರ್ಮ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/- ರಿಂದ 1,82,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

UAS Bangalore ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಮತ್ತು ಫಾರ್ಮ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

UAS Bangalore ನೇಮಕಾತಿ 2022 ಅರ್ಜಿ ಶುಲ್ಕ :

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ಅಭ್ಯರ್ಥಿಗಳು 2,000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 1,000/-ರೂ ಮತ್ತು ಫಾರ್ಮ್ ಮ್ಯಾನೇಜರ್ ಹುದ್ದೆಗಳಿಗೆ ಸಾಮಾನ್ಯ ಅಭ್ಯರ್ಥಿಗಳು 1,000/-ರೂ ಮತ್ತು ಪರಿಶಿಷ್ಟ ಪಂಗಡ/ಪರಿಶಿಷ್ಟ ಜಾತಿ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ. ಮಾಜಿ ಸೈನಿಕ/ಪಿಡಬ್ಲ್ಯೂಡಿ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

UAS Bangalore ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಮತ್ತು ಫಾರ್ಮ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://uasbangalore.edu.in/ ಗೆ ಭೇಟಿ ನೀಡಿ. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 9,2022ರೊಳಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ:

Administrative Officer, University of Agricultural Science, GKVK, Bengaluru - 560065, Karnataka.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
UAS bangalore recruitment 2022 notification has been released for 19 assistant professor and farm manager posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+