ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಸೆಪ್ಟೆಂಬರ್ 26ಕ್ಕೆ ನೇರ ಸಂದರ್ಶನ : ಆಸಕ್ತರು ಭಾಗವಹಿಸಿ

ಕೃಷಿ ವಿಶ್ವವಿದ್ಯಾಲಯವು 3 ವ್ಯವಹಾರ ವ್ಯವಸ್ಥಾಪಕ,ವ್ಯವಸ್ಥಾಪಕ, ಕಾನೂನು ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ http://www.uasd.edu/ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 26ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕೃಷಿ ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ವ್ಯವಹಾರ ವ್ಯವಸ್ಥಾಪಕ,ವ್ಯವಸ್ಥಾಪಕ, ಕಾನೂನು ಕಾರ್ಯನಿರ್ವಾಹಕ
Organisation ಕೃಷಿ ವಿಶ್ವವಿದ್ಯಾಲಯ
Educational Qualification ಎಂಬಿಎ /ಪಿಜಿಡಿಎಂ / ಸ್ನಾತಕೋತ್ತರ ಪದವಿ, ಎಂ.ಟೆಕ್/ಎಂಬಿಎ, ಎಲ್‌ಎಲ್‌ಎಂ
Job Location ಧಾರವಾಡ (ಕರ್ನಾಟಕ)
Salary Scale ವ್ಯವಹಾರ ವ್ಯವಸ್ಥಾಪಕ - ತಿಂಗಳಿಗೆ 2,00,000 /-ರೂ, ವ್ಯವಸ್ಥಾಪಕ - ತಿಂಗಳಿಗೆ 1,50,000/-ರೂ ಮತ್ತು ಕಾನೂನು ಕಾರ್ಯನಿರ್ವಾಹಕ - ತಿಂಗಳಿಗೆ 50,000/-ರೂ
Application Start Date September 6, 2019
Application End Date September 26, 2019

ಶೈಕ್ಷಣಿಕ ವಿದ್ಯಾರ್ಹತೆ:

ವ್ಯವಹಾರ ವ್ಯವಸ್ಥಾಪಕ ಹುದ್ದೆಗಳಿಗೆ ಎಂಬಿಎ /ಪಿಜಿಡಿಎಂ / ಸ್ನಾತಕೋತ್ತರ ಪದವಿ, ವ್ಯವಸ್ಥಾಪಕ ಹುದ್ದೆಗಳಿಗೆ ಎಂ.ಟೆಕ್/ಎಂಬಿಎ/ಪಿಜಿಡಿಎಂ/ಸ್ನಾತಕೋತ್ತರ ಪದವಿ ಮತ್ತು ಕಾನೂನು ಕಾರ್ಯನಿರ್ವಾಹಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ / ಎಲ್‌ಎಲ್‌ಎಂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಟ 50 ವರ್ಷ ಮತ್ತು ಕಾನೂನು ಕಾರ್ಯನಿರ್ವಾಹಕ ಹುದ್ದೆಗಳಿಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಹರು.

ವೇತನದ ವಿವರ:

ವ್ಯವಹಾರ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 2,00,000/-ರೂ, ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,50,000/-ರೂ ಮತ್ತು ಕಾನೂನು ಕಾರ್ಯನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಈ ಹುದ್ದೆಗಳಿಗೆ ಸೇರ ಬಯಸುವ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಧಾರವಾಡ ಕಚೇರಿಯಲ್ಲಿ ಸೆಪ್ಟೆಂಬರ್ 26,2019 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಚೇರಿಯ ವಿಳಾಸ:

ಸಂಶೋಧನಾ ಸಹಾಯಕ ನಿರ್ದೇಶಕ,
ಕೃಷಿ ವಿಶ್ವವಿದ್ಯಾಲಯ,
ಧಾರವಾಡ-05

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
UAS Dharwad Recruitment 2019-20:Walk-in-Interview for 03 Business Manager, Manager, Legal Executive vacancies. University of Agricultural Sciences Dharwad (UAS Dharwad) invited eligible and interested candidates to attend the walk-in-interview to fill up Business Manager, Manager, Legal Executive Posts through UAS Dharwad official notification September 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X