ಮಾನವ ವಿಕಾಸ ಹಾಗೂ ಕುಟುಂಬ ಅಧ್ಯಯನ ವಿಭಾಗ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಕೃಷಿ ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ:
ಎಂಹೆಚ್ಎಸ್ಸಿ ಪದವಿ ಅಥವಾ ಡಾಕ್ಟರಲ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
ವೇತನ:
ಎಂಹೆಚ್ಎಸ್ಸಿ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ತಿಂಗಳಿಗೆ 27,000/- ರಿಂದ 30,0000/-ರೂ ಮತ್ತು ಡಾಕ್ಟರೇಟ್ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ತಿಂಗಳಿಗೆ 32,000/- ರಿಂದ 35,000/-ರೂ ವೇತನವನ್ನು ನೀಡಲಾಗುವುದು.
ಸಂದರ್ಶನದ ವಿವರ:
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.uasd.edu/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಡಿಸೆಂಬರ್ 2,2020ರಂದು ಬೆಳಿಗ್ಗೆ 10 ಗಂಟೆಗೆ ವಿದ್ಯಾರ್ಥಿಗಳು, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ, ಧಾರವಾಡ ಇವರ ಕಚೇರಿಯಲ್ಲಿ ಖುದ್ದು ಸಂದರ್ಶನಕ್ಕೆ ಹಾಜರಾಗಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











