ಧಾರವಾಡ ಕೃಷಿ ವಿಶ್ವವಿದ್ಯಾಲಯವು 2 ಅರೆಕಾಲಿಕ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 28,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
CRITERIA | DETAILS |
Name Of The Posts | ಅರೆಕಾಲಿಕ ಶಿಕ್ಷಕ |
Organisation | ಕೃಷಿ ವಿಶ್ವವಿದ್ಯಾಲಯ |
Educational Qualification | ಪಿಹೆಚ್.ಡಿ |
Job Location | ಧಾರವಾಡ (ಕರ್ನಾಟಕ) |
Salary Scale | ತಿಂಗಳಿಗೆ 40,000/-ರೂ |
Application Start Date | February 17, 2020 |
Application End Date | February 28, 2020 |
ಶೈಕ್ಷಣಿಕ ವಿದ್ಯಾರ್ಹತೆ:
ಪಿ.ಹೆಚ್‌ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶಕ್ಕೆ ಹಾಜರಾಗಬಹುದು.
ವಯೋಮಿತಿ:
ಧಾರವಾಡ ಕೃಷಿ ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.
ವೇತನದ ವಿವರ:
ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಸಂದರ್ಶನದ ವಿವರ:
ಅರ್ಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ದಿನಾಂಕ ಮತ್ತು ಸಮಯ: ಫಬ್ರವರಿ 28,2020ರಂದು ಬೆಳಿಗ್ಗೆ 11:00 ಘಂಟೆಗೆ
ಸಂದರ್ಶನ ನಡೆಯುವ ಸ್ಥಳ:
ಡೀನ್ (ಕೃಷಿ) ರವರ ಕಛೇರಿ,
ಕೃಷಿ ಅರ್ಥಶಾಸ್ತ್ರ ವಿಭಾಗ,
ಕೃಷಿ ಮಹಾವಿದ್ಯಾಲಯ,
ಧಾರವಾಡ-580005
ಅಧಿಕೃತ ವೆಬ್‌ಸೈಟ್: http://www.uasd.edu/
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ